Home ರಾಜಕೀಯ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

24
0

ಬೆಂಗಳೂರು: 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯ ಅವರು, 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು.

ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here