ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ ಪದಕ ವಿಜೇತರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಛತ್ತೀಸ್ಗಢದಲ್ಲಿ ನಡೆದ ಪ್ರಥಮ ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸನ್ಮಾನಿಸಿದರು.
ಮಾರ್ಚ್ 23ರಿಂದ ಏಪ್ರಿಲ್ 3ರವರೆಗೆ ನಡೆದ ಈ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವು 32 ಚಿನ್ನ, 8 ಬೆಳ್ಳಿ ಮತ್ತು 7 ಕಂಚಿನ ಪದಕಗಳನ್ನು ಗೆದ್ದು ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳನ್ನು ಅಭಿನಂದಿಸಿ, ರಾಜ್ಯಕ್ಕೆ ಕೀರ್ತಿ ತಂದಿರುವುದಕ್ಕೆ ಶ್ಲಾಘಿಸಿದರು ಹಾಗೂ ಭವಿಷ್ಯದಲ್ಲಿಯೂ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸಿದರು.
