Home ಅಪರಾಧ ಡ್ರಗ್ಸ್‌ ಹಾವಳಿ ತಡೆಗಟ್ಟಲು ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

ಡ್ರಗ್ಸ್‌ ಹಾವಳಿ ತಡೆಗಟ್ಟಲು ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

12
0
  • ಶಾಸಕರಾದ ದಿನೇಶ ಗೂಳಿಗೌಡ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು
  • ವಿಧಾನಸೌಧದಲ್ಲಿಂದು ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ, ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಸಮಿತಿಯೊಂದನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ ಎಂದು ವಿಪ ಶಾಸಕರಾದ ದಿನೇಶ ಗೂಳಿಗೌಡ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ತಮ್ಮ ಮನವಿಗೆ ಸ್ಪಂದಿಸಿ ಕ್ರಮ ವಹಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಪೋಶಕರ ಪರವಾಗಿ, ವಿದ್ಯಾರ್ಥಿಗಳ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇದೇ ವರ್ಷ ಜನವರಿ 16 ರಂದು ಶಾಸಕರಾದ ದಿನೇಶ ಗೂಳಿಗೌಡ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ರಾಜ್ಯದಲ್ಲಿ ಮಾದಕ ದ್ರವ್ಯದ ಹಾವಳಿ ಹೆಚ್ಚುತ್ತಿದೆ.

ಕಾಲೇಜ್‌ಗಳ ಸುತ್ತಲಿನ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಭವಿಷ್ಯದ ಭಾರತದ ಕನಸುಗಳಾದ ಯುವ ಜನರು ದಾರಿ ತಪ್ಪುತ್ತಿದ್ದಾರೆ. ಇದನ್ನು ತಡೆಯಲು ಪೊಲೀಸ್‌ ಇಲಾಖೆ ಕ್ರಮ ವಹಿಸಬೇಕು. ಜಾಗೃತಿ ಕಾಯಕ್ರಮಗಳನ್ನು ಆಯೋಜಿಸಬೇಕು ಎಂದು ಮನವಿ ಮಾಡಿದ್ದರು. ಈ ಸಂಬಂಧ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್‌ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದರು.

ಪತ್ರದ ಭಾಗವಾಗಿ ಬುಧವಾರ ವಿಧಾನ ಸೌಧದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಮಾದಕ ದ್ರವ್ಯ ಹಾವಳಿ ತಡೆಯಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ. ಮಾತ್ರವಲ್ಲದೇ, ಕ್ರಮ ವಹಿಸಲು ಪೊಲೀಸ್‌ ಮಹಾ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಯುವ ಜನತೆಯ ಬಗ್ಗೆ ಕಾಳಜಿ ವಹಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ದಿನೇಶ ಗೂಳಿಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here