ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, 15 ವರ್ಷಗಳಲ್ಲಿ ಮೊದಲ ಆದಿವಾಸಿ ಸಮುದಾಯ ಸಭೆ ನಡೆಸಿದ್ದು, ಸ್ಥಳದಲ್ಲೇ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ಕೊಟ್ಟಿದ್ದಾರೆ.
ಬುಡಕಟ್ಟು ಸಮುದಾಯಗಳಿಗೆ ಸೌಕರ್ಯ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸಭೆ ಮಾಡಲಾಗಿದೆ.
ಕಳೆದ 15 ವರ್ಷಗಳಲ್ಲಿ ಆದಿವಾಸಿ ಸಮುದಾಯ, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮೊದಲ ಸಭೆ ಮಾಡಿದ್ದಾರೆ. ಆ ಮೂಲಕ ಸ್ಥಳದಲ್ಲೇ ಪರಿಹಾರಕ್ಕೆ ಸೂಚಿಸಿದ್ದಾರೆ. ಅಲ್ಲದೆ 2 ತಿಂಗಳಲ್ಲಿ ಮತ್ತೆ ಇದೇ ಸಭೆ ಕರೆಯುತ್ತೇನೆ. ಈ ಸಭೆಯ ನಿರ್ಣಯಗಳು ಜಾರಿ ಆಗದೇ ಇದ್ದರೆ ನಾನು ಸಹಿಸಲ್ಲ. ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.
ಸತತ 200 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ಬುಡಕಟ್ಟು ಜನರಿಗೆ ಹಕ್ಕುಪತ್ರ ವಿತರಣೆಗೆ ಇರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಹಕ್ಕುಪತ್ರ ಹೊಂದಿದವರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅರ್ಹತೆ ಪಡೆಯುವ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.