Home ಬೆಂಗಳೂರು ನಗರ Odisha Train Accident: ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

Odisha Train Accident: ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

46
0
CM Siddaramaiah instructs KMF officials not to reduce the price of milk purchased from NOver 1500 passengers sheltered at Baiyappanahalli railway station
CM Siddaramaiah instructs KMF officials not to reduce the price of milk purchased from NOver 1500 passengers sheltered at Baiyappanahalli railway station

ಬೆಂಗಳೂರು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ.

ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದ್ದು, ಈಶಾನ್ಯ ರಾಜ್ಯಗಳಿಗೆ ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾನದಲ್ಲೇ ದಿನ ಕಳೆಯುವಂತಹ ಪರಿಸ್ಥಿತಿ ಒದಗಿದ್ದರಿಂದ, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಬಿಬಿಎಂಪಿ ವಲಯ ಆಯುಕ್ತ ಪಿ.ಎನ್.ರವೀಂದ್ರ, ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ಮತ್ತು ತಂಡದವರ ಮಾರ್ಗದರ್ಶನದಲ್ಲಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ವಲಸೆ ಕಾರ್ಮಿಕರಿಗೆ ಊಟ, ತಿಂಡಿ, ನೀರು ಇತ್ಯಾದಿಗಳ ವ್ಯವಸ್ಥೆಯನ್ನು ಪೂರೈಸಲಾಗಿದೆ.ಬಿಬಿಎಂಪಿ ವತಿಯಿಂದ ಅವರಿಗೆ ವೈದ್ಯಕೀಯ ಸೌಲಭ್ಯ ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಪಾಟೀಲ್, ಕಾರ್ಮಿಕ ಇಲಾಖೆ ಆಯುಕ್ತರು, ಉಮೇಶ್, ಉಪ ಕಾರ್ಮಿಕ ಆಯುಕ್ತರು,ಸಂತೋಷ್ ಹಿಪ್ಪರಗಿ, ಸಹಾಯಕ ಕಾರ್ಮಿಕ ಆಯುಕ್ತರು, ಇನ್ನಿತರ ಅಧಿಕಾರಿಗಳು ಪರಿಹಾರ ಕಾರ್ಯದ ನೇತೃತ್ವ ವಹಿಸಿದ್ದರು. ಈ ಪರಿಹಾರ ಕಾರ್ಯಕ್ಕೆ ಜೆಎಂಸಿ, ಕೆ೨ಕೆ, ಡಿಮರ‍್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳು ಬೆಂಬಲ ನೀಡುವ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಿದ್ದಾರೆ.

ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ತಂಗಿರುವ ಪ್ರಯಾಣಿಕರ ಕಷ್ಟಗಳಿಗೆ ಸ್ಪಂದಿಸಿ, ಮರ‍್ಸಿ ಫೌಂಡೇಷನ್ , ಶ್ರೀ ತೌಸೀಫ್ ಮತ್ತು ತನ್ವೀರ್ , ಶ್ರೀ ಕ್ಲಿಫ್ಟಿನ್ ಹಾಗೂ ಮೈತ್ರಿ ಹಾಗೂ ತಂಡದವರ ಸ್ವಯಂ ಸೇವಕರು ಕೈ ಜೋಡಿಸಿದರು. ಮುಖ್ಯಮಂತ್ರಿಗಳು ಕಾರ್ಮಿಕರ ನೆರವಿಗೆ ಶ್ರಮಿಸಿದ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಂತೆ ಕೆಎಂಎಫ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು:

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು.

ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು.

LEAVE A REPLY

Please enter your comment!
Please enter your name here