
ಬೆಂಗಳೂರು: ನಗರಪರಿವೀಕ್ಷಣೆಯ ವೇಳೆ ಸಿಎಂ ಸಿದ್ದರಾಮಯ್ಯ ಘನತ್ಯಾಜ್ಯ ನಿರ್ವಹಣೆ ಮತ್ತು ರಸ್ತೆ ಸುರಕ್ಷತೆಯಲ್ಲಿ ಎಂಜಿನಿಯರ್ಗಳ ನಿರ್ಲಕ್ಷ್ಯ ಕಂಡು ಗರಂ ಆದರು.
ವಾರ್ಡ್ ನಂ. 23 ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದಲ್ಲಿ ಒಳಗೆ ಸಾಕಷ್ಟು ಜಾಗ ಖಾಲಿ ಇದ್ದರೂ, ತ್ಯಾಜ್ಯವನ್ನು ಹೊರಗೆ ರಾಶಿಯಾಗಿ ಹಾಕಲಾಗಿರುವುದನ್ನು ಸಿಎಂ ಗಮನಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಅವರು, ಬಿ.ಸ್ಮೈಲ್ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ನೋಟಿಸ್ ನೀಡುವಂತೆ ಸೂಚಿಸಿದರು.

ಅಲ್ಲಿಂದ ಕೆಲವೇ ದೂರದಲ್ಲಿ ರಸ್ತೆಯ ಮೇಲೆ ಜೆಲ್ಲಿ ಕಲ್ಲುಗಳು ಬಿದ್ದಿರುವುದನ್ನು ಗಮನಿಸಿದ ಸಿಎಂ, ಇದು ಪ್ರಯಾಣಿಕರಿಗೆ ಅಪಾಯಕಾರಿಯಾಗುವುದಾಗಿ ಹೇಳಿ, ಈ ನಿರ್ಲಕ್ಷ್ಯಕ್ಕೆ ಕಾರಣರಾದ ಮುಖ್ಯ ಎಂಜಿನಿಯರ್ ರಾಘವೇಂದ್ರ ಪ್ರಸಾದ್ ಅವರಿಗೂ ನೋಟಿಸ್ ನೀಡಲು ಸೂಚಿಸಿದರು.
ಸಿದ್ಧರಾಮಯ್ಯ ಎಂಜಿನಿಯರ್ಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿ, ಇಂತಹ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದರು. ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ಜವಾಬ್ದಾರಿ ವಹಿಸಬೇಕೆಂದು ಅವರು ಒತ್ತಾಯಿಸಿದರು.