ಬಳ್ಳಾರಿ: ಇಂದು ಜೂ.21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಭಾರತದ ದೇಶದ ಅತ್ಯಂತ ಪುರಾತಾನ ಯೋಗಾಭ್ಯಾಸವನ್ನು 10 ವರ್ಷಗಳಿಂದೀಚೆಗೆ ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ ಜಿಂದಾಲ್‌ನ ಬಸವೇಶ್ವರ ನಗರದ ಆವರಣದಲ್ಲಿ ಮಾಡಿದರು.
ಯೋಗ ದಿನಾಚರಣೆ ಪ್ರಯುಕ್ತ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಭಾರತವು ಜಗತ್ತಿಗೆ ಪರಿಚಯಿಸಿದ ಅನನ್ಯ ಸಾಧನ ಯೋಗ. ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಸಾಧ್ಯ. ನಿತ್ಯ ಜೀವನಕ್ಕೆ ಬೇಕಿರುವ ಏಕಾಗ್ರತೆ, ಸಂಯಮ, ಒತ್ತಡ ನಿರ್ವಹಣೆಯ ಕೌಶಲ್ಯಗಳು ಯೋಗದಿಂದ ಲಭಿಸುತ್ತವೆ ಎಂದು ಬರೆದುಕೊಂಡಿದ್ದಾರೆ.
ಬಳ್ಳಾರಿಯ JSW ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗದಿನದಲ್ಲಿ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಈ.ತುಕಾರಾಂ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ನಟಿ ಶ್ರೀಲೀಲಾ, ವಚನಾನಂದ ಸ್ವಾಮೀಜಿ, ಶಾಸಕ ಶ್ರೀನಿವಾಸ್, KMF ಅಧ್ಯಕ್ಷ ಭೀಮಾನಾಯ್ಕ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.