CM Siddaramaiah to inaugurate Flower show at Lalbagh from today
ಬೆಂಗಳೂರು:
ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಇಂದು ಆಗಸ್ಟ್ 4 ಶುಕ್ರವಾರದಿಂದ 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಫಲಪುಷ್ಪ ಪ್ರದರ್ಶನ ಏರ್ಪಡಲಿದೆ.
76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆಯಲಿರುವ 214ನೇ ಫ್ಲವರ್ ಶೋ ಇದಾಗಿದೆ. ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯರನವರು ಉದ್ಘಾಟನೆ ಮಾಡಲಿದ್ದಾರೆ. ಕೆಂಗಲ್ ಹನುಮಂತಯ್ಯನವರು ಕಟ್ಟಿಸಿದ ವಿಧಾನಸೌಧ ಪ್ರತಿಕೃತಿ ಈ ಬಾರಿಯ ಪ್ರದರ್ಶನದ ವಿಶೇಷ.
ಇಂದಿನಿಂದ ಆರಂಭವಾಗುವ ಫಲಪುಷ್ಪ ಪ್ರದರ್ಶನ ಆಗಸ್ಟ್ 15ರವರೆಗೂ ಮುಂದುವರಿಯಲಿದೆ. ಫ್ಲವರ್ ಶೋಗೆ ಎರಡೂವರೆ ಕೋಟಿ ಹಣ ವೆಚ್ಚ ಮಾಡಲಾಗಿದೆ.
ಫ್ಲವರ್ ಶೋ ವೀಕ್ಷಣೆಗೆ ಲಕ್ಷಾಂತರ ಜನ ಆಗಮ ಹಿನ್ನಲೆ ಸಂಚಾರ ದಟ್ಟಣೆ ಉಂಟಾಗಲಿದೆ. ಹಾಗಾಗಿ ಪರ್ಯಾಯ ಮಾರ್ಗ ಜೊತೆಗೆ ನಿಗದಿತ ಸ್ಥಳದಲ್ಲಿ ವಾಹನ ಪಾರ್ಕ್ ಮಾಡಲು ಸೂಚನೆ ನೀಡಲಾಗಿದೆ.
