ಮಧ್ಯಾಹ್ನ 2:30ಕ್ಕೆ ಲೋಕ ಭವನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; 3 ಗಂಟೆಗೆ ಕೃಷ್ಣ ನಿವಾಸದಲ್ಲಿ ಪತ್ರಿಕಾಗೋಷ್ಠಿ
ಬೆಂಗಳೂರು, ಮೇ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2:30ಕ್ಕೆ ಲೋಕ ಭವನಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮ ತಂಡ ಅಧಿಕೃತ ಮಾಹಿತಿ ಹಂಚಿಕೊಂಡಿದೆ.
ಅದಾದ ಬಳಿಕ ಮಧ್ಯಾಹ್ನ 3 ಗಂಟೆಗೆ ತಮ್ಮ ಗೃಹ ಕಚೇರಿ ‘ಕೃಷ್ಣಾ’ ನಿವಾಸದಲ್ಲಿ ಮುಖ್ಯಮಂತ್ರಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿನ ನಾಯಕತ್ವ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳ ನಡುವೆಯೇ ಈ ಪತ್ರಿಕಾಗೋಷ್ಠಿಗೆ ಮಹತ್ವ ಹೆಚ್ಚಾಗಿದೆ. ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಲು ಕೋರಲಾಗಿದೆ.
