ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಳೆ (ಡಿ.19) ಪ್ರಧಾನಿ ನರೇಂದ್ರ ಮೋದಿ ಬೇಟಿಯಾಗಲು ಅವಕಾಶ ನೀಡಲಾಗಿದೆ. ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿಗಳು ಸಂಸತ್ ಭವನದಲ್ಲಿ ಪ್ರಧಾನಿ ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಗಳ ಕುರಿತು ಚರ್ಚಿಸಲಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕೃಷಿ ಸಚಿವರ ಬೇಟಿಗೆ ಸಿಎಂ ಸಿದ್ದರಾಮಯ್ಯ ನಾಲ್ಕು ಬಾರಿ ಪತ್ರ ಬರೆದು ಮನವಿ ಮಾಡಿದ್ದರು, ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯಾವಕಾಶ ನೀಡಿದ್ದಾರೆ.
ದೆಹಲಿಯಲ್ಲಿ ನಾಳೆ ಪ್ರಧಾನಿ @narendramodi ಅವರನ್ನು ಭೇಟಿಮಾಡಿ ಬರಪರಿಸ್ಥಿತಿ ಸಂಬಂಧ ಚರ್ಚೆ ನಡೆಸುತ್ತೇನೆ.
— CM of Karnataka (@CMofKarnataka) December 18, 2023
ನೆರೆರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ.
– ಮುಖ್ಯಮಂತ್ರಿ @siddaramaiah… pic.twitter.com/spgZfEZUUb
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಬರದ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಭೆಟಿಗೆ ಅವಕಾಶ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು.
ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿನ ಬರಗಾಲದ ಕುರಿತು ಚರ್ಚಿಸಿ, ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಸಾಧ್ಯತೆ ಇದೆ. ನರೇಗಾ ಯೋಜನೆಯಡಿ ಮಾನವ ಸಂಪನ್ಮೂಲ ಹೆಚ್ಚಿಸುವುದು ಸೇರಿದಂತೆ,ಜಿಎಸ್ಟಿ ಬಾಕಿ, ಕೇಂದ್ರದ ಸಹಾಯಾನುದಾನಗಳು, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಕಡಿತದ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.