Home ಕರ್ನಾಟಕ Devanahalli Famers Victory: ದೇವನಹಳ್ಳಿಯಲ್ಲಿ ಭೂಸ್ವಾಧೀನ ರದ್ದಿಗೆ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ, ರೈತರ ಹೋರಾಟಕ್ಕೆ...

Devanahalli Famers Victory: ದೇವನಹಳ್ಳಿಯಲ್ಲಿ ಭೂಸ್ವಾಧೀನ ರದ್ದಿಗೆ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ, ರೈತರ ಹೋರಾಟಕ್ಕೆ ಜಯ

106
0
CM Siddaramaiah's historic decision to cancel land acquisition in Devanahalli, victory for farmers' struggle

ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳು ಮತ್ತು ರೈತ ಮುಖಂಡರ ಸಭೆ ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಈಗಾಗಲೇ ಭರವಸೆ ನೀಡಿದ್ದಂತೆ ರೈತಪರ ನಿಲುವು ಇಟ್ಟುಕೊಂಡು ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದೇವೆ” ಎಂದರು.

ಆದಾಗ್ಯೂ, ಜಮೀನು ನೀಡಲು ಇಚ್ಛೆ ಹೊಂದಿರುವ ರೈತರಿಂದ ಮಾತ್ರ ಭೂಸ್ವಾಧೀನ ಮಾಡಲಾಗುವುದು ಎಂದ ಸಿಎಂ, ಅವರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು ಎಂದು ಹೇಳಿದರು.

1777 ಎಕರೆ ಭೂಮಿಯಲ್ಲಿ ಏರೋಸ್ಪೇಸ್ ಮತ್ತು ಕೈಗಾರಿಕೆಗಳ ಸ್ಥಾಪನೆಗಾಗಿ ಯೋಜನೆ ರೂಪಿಸಲಾಗಿತ್ತು. ಆದರೆ ಅದು ಫಲವತ್ತಾದ ಕೃಷಿ ಭೂಮಿ ಆಗಿದ್ದರಿಂದ ಮತ್ತು ಅಲ್ಲಿ ಹೋರಾಟಗಳು ಉಗ್ರಗೊಂಡಿದ್ದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ವಿವರಿಸಿದರು.

Also Read: CM Siddaramaiah Halts Controversial Land Acquisition in Devanahalli, Affirms Pro-Farmer Stand

“ರಾಜ್ಯದಲ್ಲಿ ಈ ಮಟ್ಟದ ಭೂಸ್ವಾಧೀನ ವಿರೋಧ ಮೊದಲ ಬಾರಿಗೆ ಕಾಣುತ್ತಿದೆ. ಅಲ್ಲಿ ರೈತರು ತಮ್ಮ ಭೂಮಿಯ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ. ಅವರ ಬೇಡಿಕೆಗೆ ತಕ್ಕಂತೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ,” ಎಂದು ಅವರು ಸ್ಪಷ್ಟಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ನ್ಯಾಯದ ನಿಲುವನ್ನು ಕೇವಲ ಮಾತಿನಲ್ಲಿ ಮಾತ್ರವಲ್ಲ, ಕಾರ್ಯರೂಪದಲ್ಲೂ ತೋರಿಸಿದುದಾಗಿ ನಟ ಮತ್ತು ಹೋರಾಟಗಾರ ಪ್ರಕಾಶ್ ರಾಜ್ ಹೇಳಿದರು.

ಸಭೆಯಲ್ಲಿ ಸಚಿವರುಗಳಾದ ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಹೆಚ್.ಕೆ. ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ ಹಾಗೂ ರೈತ ಪ್ರತಿನಿಧಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here