Home ರಾಜಕೀಯ Muda Scam | ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್

Muda Scam | ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್

28
0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

LEAVE A REPLY

Please enter your comment!
Please enter your name here