ಬೆಂಗಳೂರು:
ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಅನುದಾನ ಬಿಡುಗಡೆ ಮಾಡಲು ಸಾಧ್ಯವಾಗಿರಲಿಲ್ಲ ಈಗ ರಾಜ್ಯದ ಆರ್ಥಿಕ ಪರಿಸ್ಥಿತಿಯು ಸುಧಾರಣೆ ಹಂತದಲ್ಲಿದ್ದು,ಅನು ದಾನವನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇನೆ ಹಾಗಾಗಿ ಸೋಮವಾರ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ಕೈಬಿ ಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದು ಮನವಿ ಮಾಡಿದ್ದಾರೆ.
ಗೃಹ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸುವ ಕುರಿತು ಬರೆದ ಪತ್ರ ತಲುಪಿದೆ. ಪತ್ರದಲ್ಲಿ ಹಾಸನ ಜಿಲ್ಲೆಯ ವಿವಿ ಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಸಂಬಂಧಿಸಿದಂತೆ ಜನವರಿ 25 ರ ಸೋಮವಾರದಂದು ಮುಖ್ಯಮಂ ತ್ರಿಗಳ ಗೃಹ ಕಚೇರಿ ಕೃಷ್ಣಾ ಕಛೇರಿಯ ಆವರಣದಲ್ಲಿ ಹಾಸನ ಜಿಲ್ಲೆಯ ಜೆಡಿಎಸ್,ಶಾಸಕರು ಗಳ ಪ್ರತಿಭಟನೆ ನಡೆಸುವ ಬಗ್ಗೆ ಪ್ರಸ್ತಾಪಿಸಿದ್ದೀರಿ. ತಮಗೆ ತಿಳಿದಿರುವಂತೆ ವಿಶ್ವವ್ಯಾಪಿಯಾಗಿರುವ ಕೋವಿಡ್-19 ಸಾಂಕ್ರಾಮಿಕ ದಿಂದಾಗಿ ವಿಶ್ವದ ವಿವಿಧ ರಾಷ್ಟ್ರಗಳೂ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಆರ್ಥಿಕ ತೆಯ ಮೇಲೆ ಪರಿಣಾಮ ಬೀರಿದೆ.ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಘೋಷಿಸಿದ ಲಾಕ್-ಡೌನ್‌ನಿಂದಾಗಿ ಜನರ ಆರ್ಥಿಕತೆಯ ಮೇಲೆ ಉಂಟಾದ ಪರಿಣಾಮ ನಿವಾರಣೆಗೆ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಮಾದರಿ ಯಾಗಿ ಪರಿಹಾರ ಪ್ಯಾಕೇಜ್ ಗಳನ್ನು ನೀಡಿದೆ.
ದೇಶದ ವಿವಿಧ ರಾಜ್ಯಗಳು ಸರ್ಕಾರಿ ಸಿಬ್ಬಂದಿಗೆ ವೇತನ ಪಾವತಿಸದಂತಹ ತೀರ್ಮಾನ ತೆಗೆದುಕೊಂಡಿದ್ದರೂ ಸಹ ನಮ್ಮ ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳ ನೌಕರರ ವೇತನವೂ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ವೇತನವ ನ್ನೂ ಪೂರ್ಣ ಪ್ರಮಾಣದಲ್ಲಿ ಪಾವತಿಸಿದೆ.
ಕೋವಿಡ್-19 ನಿಂದಾದ ಆರ್ಥಿಕ ಸಂಕಷ್ಟದ ಮಧ್ಯೆಯೂ ಯಾವು ದೇ ಸರ್ಕಾರಿ ಯೋಜನೆಗಳನ್ನು ತಡೆಹಿಡಿಯದೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ಅನುದಾನ ಬಿಡುಗಡೆ ಯಾಗದೇ ಇರುವುದಕ್ಕೆ ಸಿಎಂ ಪತ್ರದ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.