ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಶುಕ್ರವಾರ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮುಂಚೂಣಿ ಕಾರ್ಯಕರ್ತರ ಕೋಟಾದಡಿ ಲಸಿಕೆ ಪಡೆದರು.
ಬೆಂಗಳೂರು:
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಶುಕ್ರವಾರ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದರು.
ಕೊರೋನಾ ಲಸಿಕೆ ಪಡೆದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು 30 ನಿಮಿಷಗಳ ಕಾಲ ವೈದ್ಯರು ಅಬ್ಸರ್ವೇಷನ್ ನಲ್ಲಿ ಇರಿಸಿದರು.
ನಾನು ದೇಸಿ ಲಸಿಕೆ ಕೋವ್ಯಾಕ್ಸಿನ್ ಹಾಕಿಸಿಕೊಂಡಿದ್ದೇನೆ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬಹುದು. ಯಾವುದೇ ಸೈಡ್ ಎಫೆಕ್ಟ್ ಇರೋದಿಲ್ಲ. ಲಸಿಕೆ ಹಾಕಿಸಿಕೊಂಡರೆ ಯಾವುದೇ ಸಮಸ್ಯೆ ಅಗೋದಿಲ್ಲ, ಎಂದು ಯಡಿಯೂರಪ್ಪ ಹೇಳಿದರು.
ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ವಿಕ್ಟೋರಿಯಾ ಆಸ್ಪತ್ರೆಯ BMC-PMSSY ನಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್ ಪಡೆದುಕೊಂಡರು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ @mla_sudhakar ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.#KarnatakaFightsCorona
— CM of Karnataka (@CMofKarnataka) March 12, 2021
ಲಸಿಕೆ ಪಡೆದ ನಂತರ ಮಾತನಾಡಿದ ಸುಧಾಕರ್ ಅವರು ಎಲ್ಲ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ತಪ್ಪದೆ ಲಸಿಕೆ ಪಡೆಯಬೇಕೆಂದು ಕೋರಿದರು.
ಭಾರತ ಮತ್ತು ಕರ್ನಾಟಕವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.
ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಇಂದು ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದೆ ಎಂದು ಹಂಚಿಕೊಳ್ಳಲು ಸಂತಸವಾಗುತ್ತಿದೆ.
— Dr Sudhakar K (@mla_sudhakar) March 12, 2021
ಎಲ್ಲ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕೆಂದು ಕೋರುತ್ತೇನೆ.
ಭಾರತ ಮತ್ತು ಕರ್ನಾಟಕವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ. pic.twitter.com/lVFzHbQCJ7
ಸ್ವತಃ ವೈದ್ಯರಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮುಂಚೂಣಿ ಕಾರ್ಯಕರ್ತರ ಕೋಟಾದಡಿ ಲಸಿಕೆ ಪಡೆದಿದ್ದಾರೆ.