ಬೆಂಗಳೂರು:
ಸಂಪುಟ ವಿಸ್ತರಣೆಯ ತಿಕ್ಕಾಟ ಮುಗಿದ ಬಳಿಕ ರಾಜ್ಯದ ಅಭಿವೃದ್ಧಿಯತ್ತ ಗಮ ನಹರಿಸಿರುವ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಎಲ್ಲಾ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಬೆಳಗ್ಗೆ ೧೦.೩೦ಕ್ಕೆ ಸಭೆ ನಡೆಯಲಿದೆ.ಸಭೆಯಲ್ಲಿ ತ್ರೈ ಮಾಸಿಕ ಅಭಿವೃದ್ಧಿ,ಯೋಜನೆಗಳ ಅನುಷ್ಢಾನ,ಅನುದಾನ ವೆಚ್ಚ,ಅನುದಾನ ಹಂಚಿಕೆ,ಕೊರೋನಾ ಲಸಿಕೆ ಸೇ ರಿದಂತೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾ ರಕ್ಕೆ ಬಂದ ಆ ರಂಭದಲ್ಲಿ ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದ ಮು ಖ್ಯಮಂತ್ರಿ ಯಡಿಯೂರಪ್ಪ ಒಂದೂವರೆ ವರ್ಷದ ಬಳಿಕ ಇದೀಗ ಸಭೆ ಕರೆದಿದ್ದಾರೆ. UNI