ಬೆಂಗಳೂರು:
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸೌಧ ಆವರಣದಲ್ಲೇ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಆರೋಗ್ಯ ಏರುಪೇರಿನಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಸಿದು ಬಿದ್ದಿದ್ದಾರೆ.
#WATCH | Karnataka BJP MLA Basangouda Patil Yatnal falls unconscious following the ruckus outside the Karnataka Assembly. He has been taken to the hospital.
— ANI (@ANI) July 19, 2023
10 BJP MLAs have been suspended for this session for throwing paper at the Deputy Speaker of the Assembly and chair… pic.twitter.com/7sV4iv9VQo
ವಿಧಾನಸಭೆಯಿಂದ ಬಿಜೆಪಿಯ 10 ಸದಸ್ಯರು ಅಮಾನತು ಮಾಡಲಾಗಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾರ್ಷಲ್ಸ್ ಎಳೆದಾಟದಿಂದಾಗಿ ಶಾಸಕ ಯತ್ನಾಳ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಅವರ ಬಿಪಿ ಹೆಚ್ಚಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯತ್ನಾಳ್ ನೋಡಲು ಪತ್ನಿ ಶೈಲಜಮ್ಮ ಹಾಗೂ ಮಗ ಹರ್ಷ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ನಾನು ಸಂಪೂರ್ಣ ಗುಣಮುಖನಾಗಿದ್ದೆನೆ ಯಾರೂ ಭಯಪಡುವ ಅವಶ್ಯಕತೆಯಿಲ್ಲ
— Basanagouda R Patil (Yatnal) (@BasanagoudaBJP) July 19, 2023
ಜೈ ಶ್ರೀರಾಮ 🙏💐🚩