Home Uncategorized Complaint: ಪ್ರದೀಪ್ ಈಶ್ವರ್ ವಿರುದ್ಧ ವಿಧಾನಸಭೆ ಸ್ಪೀಕರ್​ಗೆ ದೂರು: ಕಾರಣ ಏನ್‌ ಗೊತ್ತಾ?

Complaint: ಪ್ರದೀಪ್ ಈಶ್ವರ್ ವಿರುದ್ಧ ವಿಧಾನಸಭೆ ಸ್ಪೀಕರ್​ಗೆ ದೂರು: ಕಾರಣ ಏನ್‌ ಗೊತ್ತಾ?

51
0

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್​ಬಾಸ್​ಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಭಾಗಿಯಾಗಿರುವ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರಿಗೆ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆಯಿಂದ ಲಿಖಿತ ದೂರು ನೀಡಿದೆ. ಶಾಸಕ ಸ್ಥಾನದಿಂದ ಪ್ರದೀಪ್ ಈಶ್ವರ್ ವಜಾಗೊಳಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

BJP- JDS Allience: ಮೈತ್ರಿಗೆ JDS​​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಬೆಂಬಲ

ಚಿಕ್ಕಬಳ್ಳಾಪುರ ಜನಪ್ರಿಯ ಮಾತನಾಡುವ ಶಾಸಕ ಎಂದೇ ಖ್ಯಾತರಾಗಿರುವ ಪ್ರದೀಪ್ ಈಶ್ವರ್ ಅಚ್ಚರಿ (Pradeep Eshwar) ಎನ್ನುವಂತೆ ಬಿಗ್ ಬಾಸ್ (Bigg Boss Kannada) ಮನೆ ಪ್ರವೇಶ ಮಾಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಇವರು ದೊಡ್ಮನೆಗೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಎರಡು ದಿನ ಕಾಯಿರಿ ನೋಡೋಣ ಎಂದಷ್ಟೇ ಅವರು ಹೇಳಿ ಅಚ್ಚರಿ ಮೂಡಿಸಿದ್ದರು. ಕೊನೆಗೂ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಶಾಸಕರು

ಅನಾಥ ಮಕ್ಕಳಿಗಾಗಿ ಬಿಗ್ ಬಾಸ್ ಮನೆಗೆ  ಪ್ರವೇಶ ಮಾಡಿರುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ನಿಂದ ಬಂದ ಹಣವನ್ನ ಅಪ್ಪ‌ಅಮ್ಮನಿಲ್ಲದ ಮಕ್ಕಳಿಗೆ ನೀಡಲು‌ ನಿರ್ಧಾರ ಮಾಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿರೋ ವಿಚಾರವನ್ನು ಹಲವರು ಪ್ರಶ್ನೆ ಮಾಡಿದ್ದಾರೆ.  ಸರ್ಕಾರಕ್ಕೆ ಸಾಮಾನ್ಯರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜನಪ್ರತಿನಿಧಿಯಾಗಿ ಇಂತಹ ವೇಳೆಯಲ್ಲಿ ರಿಯಾಲಿಟಿ ಶೋಗೆ ಹೋಗಬಹುದಾ ಎಂದು ಹಲವರು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರೆ.

The post Complaint: ಪ್ರದೀಪ್ ಈಶ್ವರ್ ವಿರುದ್ಧ ವಿಧಾನಸಭೆ ಸ್ಪೀಕರ್​ಗೆ ದೂರು: ಕಾರಣ ಏನ್‌ ಗೊತ್ತಾ? appeared first on Ain Live News.

LEAVE A REPLY

Please enter your comment!
Please enter your name here