Home ರಾಜಕೀಯ Karnataka ರಾಜ್ಯ ಮುಖ್ಯ ಕಾರ್ಯದರ್ಶಿ ಅಮಾನತಿಗೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು

Karnataka ರಾಜ್ಯ ಮುಖ್ಯ ಕಾರ್ಯದರ್ಶಿ ಅಮಾನತಿಗೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು

17
0
Complaint by BJP to Election Commission demanding suspension of State Chief Secretary

ಬೆಂಗಳೂರು: ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಅಧಿಕೃತವಾಗಿ ಅವಕಾಶ ಮಾಡಿಕೊಟ್ಟ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಬಿಜೆಪಿ ನಿಯೋಗವು ದೂರು ಸಲ್ಲಿಸಿದೆ.

ಮಂಗಳವಾರ ಇಲ್ಲಿನ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಭೇಟಿ ನೀಡಿದ ನಿಯೋಗವು ದೂರು ಸಲ್ಲಿಸಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಬರ ಪರಿಹಾರದ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರ, ಬಿಜೆಪಿ ವಿರುದ್ಧ ರಣದೀಪ್ ಸುರ್ಜೇವಾಲ, ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ವೇಳೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಇಂತಹ ಅನಧಿಕೃತ ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟಂತಹ ಹಾಗೂ ಕಾಂಗ್ರೆಸ್ ಸರಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯೆಲ್ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಅಮಾನತು ಮಾಡಿ ತನಿಖೆಗೆ ಆದೇಶ ನೀಡಬೇಕೆಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here