Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಳಗಾವಿ
  • ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ
  • ಬೆಳಗಾವಿ
  • ಶಿಕ್ಷಣ

ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

The Bengaluru Live December 22, 2021 3:30 PM
Complete overhaul of education system should start from university: CM Bommai

ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಳಗಾವಿ:

ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗದಲ್ಲಿ ಫ್ಲೆಕ್ಸಿಬಲ್ ಆದ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ. ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ ಇರುವ ಅಂತರವನ್ನು ಕಡಿಮೆಗೊಳಿಸಲು ಎನ್‍ಇಪಿಯನ್ನು ಜಾರಿಗೊಳಿಸಲಾಗಿದೆ. ಇಂದಿನ ಪೀಳಿಗೆ ಯಾವುದೇ ಸವಾಲುಗಳನ್ನು ಆತ್ಮಸ್ಥೈರ್ಯ, ಧೈರ್ಯದಿಂದ ಎದುರಿಸಲು ಜ್ಞಾನದ ಬಲ ಇರಬೇಕು. ಎನ್‍ಇಪಿ ಈ ಜ್ಞಾನದ ಬಲವನ್ನು ನೀಡುತ್ತದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ : ಕಿತ್ತೂರು ರಾಣಿ ಚೆನ್ನಮ್ಮ ಆತ್ಮಸ್ಥೈರ್ಯ, ಧೈರ್ಯದಿಂದ ಹೋರಾಡಿದ ಮೊದಲನೆಯ ಮಹಿಳಾ ಸ್ವತಂತ್ರ ಹೋರಾಟಗಾರರಾಗಿ ಬ್ರಿಟಿಷರನ್ನು ಮೆಟ್ಟಿನಿಂತದ್ದು ಈಗ ಇತಿಹಾಸ. ಬ್ರಿಟೀಷರನ್ನು ಹಿಮ್ಮೆಟ್ಟಿಸುವಲ್ಲಿ ಸಂಗೊಳ್ಳಿ ರಾಯಣ್ಣನ ಪಾತ್ರ ಬಹಳ ದೊಡ್ಡದು. ರಾಣಿ ಚೆನ್ನಮ್ಮನೇ ಈ ವಿಶ್ವವಿದ್ಯಾಲಯದ ಸ್ಪೂರ್ತಿ. ಈ ವಿಶ್ವವಿದ್ಯಾಲಯವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ, ಸ್ಪಷ್ಟತೆ ವಿಶ್ವವಿದ್ಯಾಲಯದ ಪ್ರತಿಯೊಬ್ಬರಿಗೂ ಇರಬೇಕು. ವಿಭಿನ್ನ, ವಿನೂತನ ಪ್ರಯೋಗ ಕಾರ್ಯಕ್ರಮಗಳನ್ನು ರೂಪಿಸಿ, ಸಮಕಾಲೀನ ಸವಾಲುಗಳನ್ನು ಎದುರಿಸುವ ಹಾಗೂ ವೈಚಾರಿಕತೆಯಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಕೇಂದ್ರಗಳಾಗಬೇಕು. ಕೇವಲ ಡಿಗ್ರಿ ಪಡೆಯಲು ಸೀಮಿತವಾಗಿರಬಾರದು. ಆಧುನಿಕ ತಂತ್ರಜ್ಞಾನ ಹಾಗೂ ಜ್ಞಾನ ಕ್ಷೇತ್ರದಲ್ಲಿನ ಬದಲಾವಣೆ ಹಾಗೂ ಬೆಳವಣಿಗೆಯ ವೇಗಕ್ಕೆ ಸರಿಸಮಾನವಾದ ಚಿಂತನೆಯನ್ನು ವಿಶ್ವವಿದ್ಯಾಲಯಗಳು ಮಾಡಬೇಕು. ಅವಿಷ್ಕಾರಗಳನ್ನು ಮಾಡುವ ಕೇಂದ್ರವಾಗಬೇಕು. ಸಂಶೋಧನೆಗಳಲ್ಲಿ ಸ್ವಂತಿಕೆ, ಹೊಸತನ ಹಾಗೂ ವಿಭಿನ್ನತೆ ಇರಬೇಕು ಎಂದು ತಿಳಿಸಿದರು.

Complete overhaul of education system should start from university: CM Bommai

ತರ್ಕಬದ್ಧ ಚಿಂತನೆಗೆ ಅವಕಾಶ: ವಿಶ್ವವಿದ್ಯಾಲಯಗಳು ತರ್ಕಬದ್ಧ ಹಾಗೂ ಲ್ಯಾಟರಲ್ ಚಿಂತನೆಗೆ ಅವಕಾಶ ನೀಡುವ ಜ್ಞಾನದ ಕೇಂದ್ರವಾಗಬೇಕು. ವಿದ್ಯಾರ್ಜನೆಗೆ ಪೂರಕವಾದ ಪರಿಸರ ವಿಶ್ವವಿದ್ಯಾಲಯದಲ್ಲಿ ದೊರೆಯಬೇಕು.ವಿಶ್ವವಿದ್ಯಾಲಯದಲ್ಲಿರುವವರು ತಮ್ಮ ಸೀಮಿತ ಪ್ರಪಂಚದಿಂದ ಹೊರಗೆ ಬರಬೇಕು. ಸಂಶೋಧನೆಗಳನ್ನು ಸಮರ್ಥಿಸಿಕೊಳ್ಳದೇ ಉಳಿದವರು ಅದರ ಉಪಯುಕ್ತತೆಯನ್ನು ನಿರ್ಧರಿಸಲಿ. ವಿಶ್ವವಿದ್ಯಾಲಯಗಳಿಗೆ ಕುಲಪತಿಗಳೇ ಮುಂದಾಳತ್ವ ವಹಿಸುವ ನಾಯಕ. ಅವರು ಇತರರಿಗೆ ಉದಾಹರಣೆಯಾಗಬೇಕು. ಮಾರ್ಗದರ್ಶನ ತೋರಬೇಕು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲು ಸರ್ಕಾರ ಬೆಂಬಲಕ್ಕೆ ನಿಲ್ಲುತ್ತದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ನನ್ನ ಹೃದಯಕ್ಕೆ ಬಹಳ ಹತ್ತಿರವಾದದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಿಶ್ವವಿದ್ಯಾಲಯ ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿ : ವಿಶ್ವವಿದ್ಯಾಲಯಕ್ಕೆ ಸುಂದರ ಪರಿಸರ, ರಸ್ತೆ, ಮೂಲಸೌಕರ್ಯಗಳನ್ನು ಒಳಗೊಂಡ ಕಟ್ಟಡವನ್ನು ಒಂದು ವರ್ಷದಲ್ಲಿ ಮುಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಕಟ್ಟಡದ ಪ್ರತಿಯೊಂದು ಕೊಠಡಿಯು ಡಿಜಿಟಲೈಸ್ ಆಗಬೇಕು. ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿಯಂತಿರಬೇಕು. ಇದು ಜ್ಞಾನದ ಶತಮಾನ. ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ. ವಿಶ್ವವಿದ್ಯಾಲಯಗಳ ಸಂಶೋಧನೆಯನ್ನು ಇಡೀ ವಿಶ್ವ ಒಪ್ಪಿಕೊಂಡರೆ ಅದರ ಉಪಯುಕ್ತತೆ ಹೆಚ್ಚುತ್ತದೆ. ವಿಶ್ವವಿದ್ಯಾಲಯದಲ್ಲಿ ಕಳೆದ 10 ವರ್ಷದಲ್ಲಿ ಕೈಗೊಂಡಿರುವ ಪಿಹೆಚ್‍ಡಿ ಸಂಶೋಧನೆ ಹಾಗೂ ಅದರ ಉಪಯುಕ್ತತೆ ಬಗ್ಗೆ ವಿಶ್ಲೇಷಣೆಯನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಸಿಎಂ ಅಶ್ವಥ್ ನಾರಾಯಣ, ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಹಾಂತೇಶ ಕವಟಗಿಮಠ, ಅರುಣ ಶಾಹಪೂರ, ಹನಮಂತ ನಿರಾಣಿ, ವಿಧಾನಪರಿಷತ್ ಚುನಾವಣೆಯಲ್ಲಿ ಜಯಶಾಲಿ ಯಾಗಿರುವ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಜೆಡಿಎಸ್ ಮುಳುಗುವ ಹಡಗು ಎಂದ ಸಿದ್ದರಾಮಯ್ಯ ಹೇಳಿಕೆಗೆ ಹೆಚ್ಡಿಕೆ ಕಿಡಿ
Next: `ಯೂನಿವರ್ಸಿಟಿ ಆಫ್ ಎಮಿನೆನ್ಸ್’ ದರ್ಜೆಗೆ 6 ವಿವಿ: ಅಶ್ವತ್ಥನಾರಾಯಣ

Related Stories

ಕೆಪಿಎಸ್‌ಸಿ ಪರೀಕ್ಷಾ ಭದ್ರತೆ ಪರಿಶೀಲನೆಯ ವಿಡಿಯೊ ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು
  • ಕರ್ನಾಟಕ
  • ಶಿಕ್ಷಣ

ಕೆಪಿಎಸ್‌ಸಿ ಪರೀಕ್ಷಾ ಭದ್ರತೆ ಕುರಿತು ಜಿಲ್ಲಾಧಿಕಾರಿಗಳು, ಎಸ್‌ಪಿಗಳೊಂದಿಗೆ ಶಿವಕುಮಾರ್ ಸಭೆ

The Bengaluru Live November 12, 2026 1:19 PM
ಕೆಪಿಎಸ್‌ಸಿ ಮತ್ತು ಕರ್ನಾಟಕ ಸರ್ಕಾರದ ಲಾಂಛನಗಳ ಮುಂದೆ OMR ಹಾಳೆಗಳೊಂದಿಗೆ ಕುಳಿತ ಇಬ್ಬರು ಅಧಿಕಾರಿಗಳ ಎಐ ಪ್ರಾತಿನಿಧಿಕ ಚಿತ್ರ
  • ಕರ್ನಾಟಕ
  • ಶಿಕ್ಷಣ

ನವೆಂಬರ್ 15ರ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಗೆ KPSC ಕಠಿಣ ಕ್ರಮ: ಮುಖ ಗುರುತು ಪರಿಶೀಲನೆ, ಇಬ್ಬರು ಇನ್ವಿಜಿಲೇಟರ್‌ಗಳು, CCTV ಮತ್ತು ವೇಗದ OMR ಅಪ್ಲೋಡ್

The Bengaluru Live November 8, 2026 10:48 AM
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
  • ಕರ್ನಾಟಕ
  • ಶಿಕ್ಷಣ

ಸರ್ಕಾರಿ ಶಾಲೆಗಳ ಅಭಿವೃದ್ಧಿ, ದಾಖಲಾತಿ ಹೆಚ್ಚಳಕ್ಕೆ ಆದ್ಯತೆ ನೀಡಿ: ಚಿಕ್ಕಮಗಳೂರಿನಲ್ಲಿ ಸಚಿವ ಮಧು ಬಂಗಾರಪ್ಪ

The Bengaluru Live November 8, 2026 3:44 AM

Latest Post

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

November 12, 2026 9:55 PM
ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

November 12, 2026 9:36 PM
ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM

ನೀವು ತಪ್ಪಿಸಿಕೊಂಡಿರಬಹುದು

ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

The Bengaluru Live November 12, 2026 9:55 PM
ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

The Bengaluru Live November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

The Bengaluru Live November 12, 2026 9:36 PM
parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ
  • ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
  • ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
©Copyright 2025 The Bengaluru Live All rights reserved. | MoreNews by AF themes.