Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಬಿವಿಕೆ ಅಯ್ಯಂಗರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ತುಷಾರ್ ಗಿರಿ ನಾಥ್
  • ಬೆಂಗಳೂರು ನಗರ

ಬಿವಿಕೆ ಅಯ್ಯಂಗರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ತುಷಾರ್ ಗಿರಿ ನಾಥ್

The Bengaluru Live December 6, 2024 4:05 PM
ಬಿವಿಕೆ ಅಯ್ಯಂಗರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ತುಷಾರ್ ಗಿರಿ ನಾಥ್

ಬಿವಿಕೆ ಅಯ್ಯಂಗರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ತುಷಾರ್ ಗಿರಿ ನಾಥ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಬಿವಿಕೆ ಅಯ್ಯಂಗರ್ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಶ್ವಿಮ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಬಿವಿಕೆ ಅಯ್ಯಂಗರ್ ರಸ್ತೆ ಚಿಕ್ಕಪೇಟೆ ಜಂಕ್ಷನ್ ನಿಂದ ಸುಲ್ತಾನ್ ಪೇಟೆ ಜಂಕ್ಷನ್ ವರೆಗಿನ 190 ಮೀಟರ್ ಉದ್ದದ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲಿಸಿ, ಈಗಾಗಲೇ ಒಂದು ಬದಿಯ ಕಾಮಗಾರಿ ಪೂರ್ಣಗೊಂಡಿರುತ್ತದೆ. ಇನ್ನೊಂದು ಬದಿಯಲ್ಲಿ ಈಗಾಗಲೇ ಕಾಂಕ್ರೀಟ್ ಹಾಕಿದ್ದು, ಕ್ಯೂರಿಂಗ್ ಆಗುತ್ತಿರುತ್ತದೆ. ಡಿಸೆಂಬರ್ 15 ರೊಳಗಾಗಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಸೂಚನೆ ನೀಡಿದರು.

ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆ ಮಧ್ಯೆಯಿರುವ ಹಳೆಯ ಮೀಡಿಯನ್ ಗಳನ್ನು ತೆಗೆದು, ಹೊಸದಾಗಿ ಫ್ರೀಕಾಸ್ಟ್ ಮೀಡಿಯನ್ಸ್ ಗಳನ್ನು ಹಾಕಬೇಕು. ಪಾದಚಾರಿ ಮಾರ್ಗ ಒಂದೇ ಸಮನಾಗಿರುವಂತೆ ಮಾಡಬೇಕು. ಸುಲ್ತಾನ್ ಪೇಟೆ ಜಂಕ್ಷನ್ ಭಾಗ ತುಂಬಾ ಅದಗೆಟ್ಟಿದ್ದು, ಅದನ್ನು ಕೂಡಲೆ ದುರಸ್ತಿಪಡಿಸಲು ಸೂಚನೆ ನೀಡಿದರು.

ಆಸ್ಪತ್ರೆ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ:

ಚಾಮರಾಜಪೇಟೆ ಜೆಜೆಆರ್ ನಗರ ಜನರಲ್ ಆಸ್ಪತ್ರೆಯ ಆವರಣದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ಜನರಲ್ ಹಾಗೂ ಹೆರಿಗೆ ಆಸ್ಪತ್ರೆ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು, 100 ಹಾಸಿಗೆಗಳ ವ್ಯವಸ್ಥೆಯಿರಲಿದೆ. ಕಟ್ಟಡದ ಕಾಮಗಾರಿಗೆ ವೇಗ ನೀಡಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದರು.

ಜೆಜೆಆರ್ ನಗರ ಜನರಲ್ ಆಸ್ಪತ್ರೆಯಲ್ಲಿ ನಾಗರೀಕರಿಗೆ ಸಿಗುವ ಸೌಲಭ್ಯಗಳ ಕುರಿತು ವೈದ್ಯರ ಬಳಿ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯಲ್ಲಿ ಜನರಲ್ ಹಾಗೂ ಹೆರಿಗೆಗಾಗಿ 30 ಹಾಸಿಗೆಗಳ ವ್ಯವಸ್ಥೆಯಿದ್ದು, ಹೆಚ್ಚಿನ ವೈದ್ಯರ ಅವಶ್ಯಕತೆಯಿದ್ದಲ್ಲಿ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು.

ಆಸ್ಪತ್ರೆ ಆವರಣದಲ್ಲಿ ಮ್ಯಾನ್ ಹೋಲ್ ನಿಂದ ಸೀವೇಜ್ ನೀರು ಬರುವುದನ್ನು ಗಮನಿಸಿ ಕೂಡಲೆ ಸರಿಪಡಿಸಲು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಬಿನ್ನಿಮಿಲ್ ರಸ್ತೆಯ ಕಾಂಕ್ರೀಟ್ ಕಾಮಗಾರಿ ಪರಿಶೀಲನೆ:

ಬಿನ್ನಿಮಿಲ್ ರಸ್ತೆಯ 220 ಮೀಟರ್ ಉದ್ದದ ರಸ್ತೆಗೆ 1 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಇದರಲ್ಲಿ ಪಾದಚಾರಿ ಮಾರ್ಗ, ಬೀದಿ ದೀಪ, ಡಕ್ಟ್ ಅಳವಡಿಸಲಾಗಿರುವುದನ್ನು ಪರಿಶೀಲಿಸಿ, ರಸ್ತೆಯಲ್ಲಿ ನೀರು ನಿಲ್ಲದಂತೆ ರಸ್ತೆ ಬದಿಯ ಚರಂಡಿಗಳಿಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಗ್ರೇಟಿಂಗ್ಸ್ ಗಳ ವ್ಯವಸ್ಥೆ ಸರಿಯಾಗಿರುವಂತೆ ಸೂಚಿಸಿದರು.

ನಿರಾಶ್ರಿತರ ಕೇಂದ್ರ ಸರಿಯಾಗಿ ನಡೆಸಲು ಸೂಚನೆ:

ಗೂಡ್ ಶೆಡ್ ರಸ್ತೆಯಲ್ಲಿ ನಿರ್ಗತಿಕರ ರಾತ್ರಿ ವಸತಿ ರಹಿತ ತಂಗುದಾಣ ಪರಿಶೀಲಿಸಿ, ಅಲ್ಲಿದ್ದ ನಿರಾಶ್ರಿತರೊಟ್ಟಿಗೆ ಮಾತನಾಡಿ, 30 ನಿರಾಶ್ರಿತರು ತಂಗಲು ವ್ಯವಸ್ಥೆಯಿದ್ದು, ಮೆಜೆಸ್ಟಿಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ವಸತಿಯಿಲ್ಲದಿರುವ ನಿರಾಶ್ರಿತರನ್ನು ಹುಡಿಕಿ ಇಲ್ಲಿ ಆಶ್ರಯ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೆಜೆಸ್ಟೆಕ್ ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಿ: ಮೆಜೆಸ್ಟಿಕ್ ನಲ್ಲಿ 350 ಮೀಟರ್ ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿ ರಸ್ತೆ ನಿರ್ಮಾಣ ಮಾಡುತ್ತಿದ್ದು, ರಸ್ತೆಯ ಅರ್ಧ ಭಾಗಗಕ್ಕೆ ಈಗಾಗಲೇ ವೈಟ್ ಟಾಪಿಂಗ್ ಮಾಡಲಾಗಿದ್ದು, ಇನ್ನು ಅರ್ಧಭಾಗವನ್ನು ಶೀಘ್ರ ಪೂರ್ಣಗೊಳಿಸಿ ತಿಂಗಳಾಂತ್ಯದೊಳಗೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಷ್ಟಪತ ಕಾರಿಡಾರ್ ಕಾಮಗಾರಿ ಪರಿಶೀಲನೆ: ನಗರದ ಅಷ್ಟಪತ ಕಾರಿಡಾರ್ ನಲ್ಲಿ ರೈಲ್ವೆ ಇಲಾಖೆಯಿಂದ ರೈಲ್ವೆ ಹಳಿ ಕೆಳಗೆ ಫ್ರೀಕಾಸ್ಟ್ ಬಾಕ್ಸ್ ಅಳವಡಿಸಿದ್ದು, ರಿಟೈನಿಂಗ್ ವಾಲ್ ಹಾಗೂ ಸ್ಥಳದಲ್ಲಿರುವ ಮಣ್ಣು ತೆರವುಗೊಳಿಸುವ ಕಾರ್ಯ ನಡೆಯತ್ತಿದೆ. ಈ ಸಂಬಂಧ ರೈಲ್ವೆ ಇಲಾಖೆ ಜೊತೆ ಸಮನ್ವಯ ಸಾಧಿಸಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಂಟಿ ಆಯುಕ್ತರಾದ ಸಂಗಪ್ಪ, ಮುಖ್ಯ ಅಭಿಯಂತರರಾದ ಶಶಿ ಕುಮಾರ್, ಲೋಕೇಶ್, ಉಪ ಆಯುಕ್ತರಾದ ಶ್ರೀನಿವಾಸ್ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
Next: 140+ ಶಾಸಕರ ಬೆಂಬಲದ ಈ ಸರ್ಕಾರವನ್ನು ದೇವೇಗೌಡರು ಹಾಗೂ ಕುಮಾರಸ್ವಾಮಿ ಕಿತ್ತುಹಾಕುವುದುಸಾಧ್ಯವೇ? ಸಾಧ್ಯವಿಲ್ಲ ಎಂದು ಡಿಕೆ ಶಿವಕುಮಾರ್

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

The Bengaluru Live November 23, 2026 5:28 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.