ಬೆಳಗಾವಿ/ಬೆಂಗಳೂರು:
‘ಪ್ರತಿಭಟನೆ ಮೂಲಕ ನನಗೆ ಸ್ವಾಗತ ಮಾಡುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ಅವರ ಸ್ವಾಗತ, ಪ್ರೀತಿ ವಿಶ್ವಾಸಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಈ ಸ್ವಾಗತವೇ ನಮಗೆ ದೊಡ್ಡ ಶಕ್ತಿಯಾಗುತ್ತದೆ. ಅವರು ಎಂತೆಂಥಾ ಘನಕಾರ್ಯಕ್ಕೆ ಈ ಸ್ವಾಗತ ಮಾಡುತ್ತಿದ್ದಾರೆ ಗೊತ್ತಾ..?!’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಲೇವಡಿ ಮಾಡಿದ್ದಾರೆ.
ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿ ಹೇಳಿದ್ದಿಷ್ಟು:
‘ಬೆಳಗಾವಿ ಉಪಚುನಾವಣೆ ಬರಬಾರದಿತ್ತು. ಆಕಸ್ಮಿಕವಾಗಿ ಬಂದಿದೆ. ಸುರೇಶ್ ಅಂಗಡಿ ಅವರ ಅಕಾಲಿಕ ಮರಣ ಈ ಚುನಾವಣೆ ತಂದಿದೆ. ಚುನಾವಣೆ ಬಹಳ ನಿಧಾನವಾಗಿದೆ. ಕಾಂಗ್ರೆಸ್ ಇಡೀ ಕ್ಷೇತ್ರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ಶ್ರೀಮತಿ ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ಅವರು, ವಿರೋಧ ಪಕ್ಷದ ನಾಯಕರು, ನಾನು, ಎಂ.ಬಿ ಪಾಟೀಲರು, ರಾಮಲಿಂಗಾ ರೆಡ್ಡಿ ಅವರು, ದೇಶಪಾಂಡೆ ಅವರು ಸೇರಿದಂತೆ ಈ ಭಾಗದ ಎಲ್ಲ ನಾಯಕರು ಸೇರಿ ಒಬ್ಬರೇ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಹೆಸರು ಸೂಚಿಸಿದ್ದೇವೆ. ನಾಳೆ ಹನ್ನೊಂದು ಗಂಟೆಗೆ ಅವರು ನಾಮ ಪತ್ರ ಸಲ್ಲಿಸುತ್ತಾರೆ. ಅದಕ್ಕೆ ನಾವು ಬಂದಿದ್ದೇವೆ. ಉತ್ತಮ ಜನ ಬೆಂಬಲ, ಜನರ ಸೇವೆ, ಯುವಕರ ಬಗ್ಗೆ ಕಾಳಜಿ, ಎಲ್ಲ ವರ್ಗದ ಜತೆ ಹೊಂದಿಕೊಂಡು ಬಾಳುವ ಸೌಮ್ಯ, ಸಜ್ಜನ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಕೊಟ್ಟಿದೆ. ಸತೀಶ್ ಅವರನ್ನು ಸಂಸತ್ತಿಗೆ ಕಳುಹಿಸಬೇಕು ಅಂತಾ ಇಡೀ ನಮ್ಮ ಬೆಳಗಾವಿಯ ಜನ ಒಕ್ಕೊರಲಿನಿಂದ ಆಶೀರ್ವಾದ ಮಾಡುತ್ತಿದ್ದಾರೆ. ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ನಾವೆಲ್ಲರೂ ಸೇರಿ ಅವರಿಗೆ ಶಕ್ತಿ ನೀಡಬೇಕು. ಕರ್ನಾಟಕದಿಂದ 25 ಮಂದಿ ಬಿಜೆಪಿಯವರು ಸಂಸತ್ತಿಗೆ ಹೋಗಿದ್ದರೂ ಒಂದು ದಿನವೂ ಅವರು ರಾಜ್ಯದ ಪರ ಧ್ವನಿ ಎತ್ತಿಲ್ಲ. ಹೀಗಾಗಿ ರಾಜ್ಯದಿಂದ ಕಾಂಗ್ರೆಸ್ ನ ಎರಡನೇ ಸಂಸದರಾಗಿ ಸತೀಶ್ ಆಯ್ಕೆಯಾಗುತ್ತಾರೆ ಎಂಬ ಆತ್ಮವಿಶ್ವಾಸದಿಂದ ಚುನಾವಣೆ ಎದುರಿಸುತ್ತಿದ್ದೇವೆ.
ಸರಕಾರದ ವೈಫಲ್ಯವೇ ಕಾಂಗ್ರೆಸ್ ಯಶಸ್ಸು
ಬಿಜೆಪಿ ಸರ್ಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸಾಗುತ್ತದೆ. ನುಡಿದಂತೆ ನಡೆಯಲು ಬಿಜೆಪಿಗೆ ಆಗಲಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ. 20 ಲಕ್ಷ ಕೋಟಿ ಕೊಟ್ಟಿದ್ದೇವೆ ಅಂತಾರೆ. ಆದರೆ ಒಬ್ಬರಿಗೂ ಅದು ತಲುಪಲಿಲ್ಲ. ಎಲ್ಲ ವರ್ಗದ ಜನರಿಗೆ ಒಂದು ತಿಂಗಳು 5 ಸಾವಿರ ಕೊಡುವುದಾಗಿ ಹೇಳಿದ್ದರು, ಅದನ್ನೂ ಕೊಟ್ಟಿಲ್ಲ. ಚಾಲಕರು, ರೈತರು, ಸವಿತಾ ಸಮಾಜ, ನೇಯ್ಗೆಯವರಿಗೆ, ಬಟ್ಟೆ ಹೊಲಿಯುವವರಿಗೆ ಯಾರಿಗೂ ನೀಡಲಿಲ್ಲ.
ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರಿದ್ದರೂ, ಒಂದು ದಿನವೂ ರಾಜ್ಯದ ಪರವಾಗಿ ಅವರು ಧ್ವನಿ ಎತ್ತಲಿಲ್ಲ.
— Karnataka Congress (@INCKarnataka) March 28, 2021
ರಾಜ್ಯಕ್ಕೆ ಬರಬೇಕಾದ ಅನುದಾನವನ್ನೂ ಕೇಳುತ್ತಿಲ್ಲ. ಅವರಿಂದ ಯಾವುದೇ ಪ್ರಯೋಜನವಿಲ್ಲ.
ರಾಜ್ಯದ ಜನರ ಧ್ವನಿಯಾಗಿ ಸಂಸತ್ತಿನಲ್ಲಿ ರಾಜ್ಯವನ್ನು ಪ್ರತಿನಿಧಿಸಲು @JarkiholiSatish ಅವರನ್ನು ಗೆಲ್ಲಿಸಿ ಕಳುಹಿಸೋಣ.
– @DKShivakumar
ಜನರೇ ಈ ಸಂದರ್ಭದಲ್ಲಿ ರೊಚ್ಚಿಗೆದ್ದು ತೀರ್ಮಾನ ಮಾಡಿದ್ದಾರೆ. ಯುವಕರು ಉದ್ಯೋಗ ಕೇಳಿದರೆ ಪಕೋಡಾ ಮಾರು ಅಂತಾರೆ. 15 ಲಕ್ಷ ಕೊಡ್ತೀನಿ ಅಂದ್ರು. ಬಿಡಿಗಾಸು ಕೊಡಲಿಲ್ಲ. ಎಲ್ಲ ವರ್ಗದ ಜನರಿಗೆ ಅಪಾರ ಅವಮಾನವಾಗಿದೆ. ಅಡುಗೆ ಅನಿಲದಿಂದ ಮಹಿಳೆಯರು ಸಂಕಷ್ಟ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ. ಇದಕ್ಕಿಂತ ಬೇರೆ ನೋವು ಏನು ಬೇಕು? ಕೊರೋನಾ ಭ್ರಷ್ಟಾಚಾರ, ಆಡಳಿತ ವೈಫಲ್ಯದಿಂದ ಬೇಸತ್ತಿರುವ ಜನರೇ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತಾರೆ.’
ನಾನು ಎಲ್ಲವನ್ನೂ ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಳ್ಳುತ್ತೇನೆ:
ಬೆಳಗಾವಿಯಲ್ಲಿ ತಮ್ಮ ಬೆಂಬಲಿಗರ ಕಾರಿನ ಮೇಲೆ ಚಪ್ಪಲಿ, ಕಲ್ಲು ತೂರಾಟ, ಗಲಾಟೆ ಹಾಗೂ ಅದಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಅವರು, ‘ಅವರು ಜವಾಬ್ದಾರಿಯುತ ಗೃಹ ಸಚಿವರಾಗಿ ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ರಾಜಕೀಯದಲ್ಲಿ ಇದೆಲ್ಲಾ ಸಹಜ. ನಮಗೆ ಹೂವಿನ ಹಾರ ಹಾಕುವವರು ಇರ್ತಾರೆ, ಜೈಕಾರ ಹಾಕುವವರೂ ಇರ್ತಾರೆ, ಧಿಕ್ಕಾರ ಹಾಕುವವರೂ ಇರ್ತಾರೆ, ಕಲ್ಲು ಹೊಡೆಯುವವರೂ ಇರ್ತಾರೆ. ಹಿಂದೆ ಮೊಟ್ಟೆ ಎಸೆಯುತ್ತಿದ್ದರು. ಹಾಗೆಯೇ ಹೂವು- ಸೇಬಿನ ಹಾರವನ್ನೂ ಹಾಕ್ತಾರೆ.
ಈಗ ಕೆಲವರು ದೊಡ್ಡ, ದೊಡ್ಡ ಸಾಧನೆ ಮಾಡಿದ್ದಾರಲ್ಲಾ ಅದಕ್ಕೆ ಹೀಗೆಲ್ಲಾ ಮಾಡ್ತಾರೆ. ಏನಾಯ್ತೋ, ಬಿಟ್ಟಿತೊ ನಾನು ಎಲ್ಲವನ್ನೂ ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಳ್ಳುತ್ತೇನೆ. ಕ್ಷೇತ್ರದ, ರಾಜ್ಯದ ಮಹಾಜನತೆ ನೋಡುತ್ತಿದ್ದಾರೆ. ಚುನಾವಣೆಯನ್ನು ಶಾಂತ ರೀತಿಯಲ್ಲಿ ನಾವು ನಡೆಸುತ್ತೇವೆ. ಆದರೆ ಬಿಜೆಪಿಯವರು ಎಂತೆಂತಹಾ ಮುತ್ತು ರತ್ನಗಳನ್ನು ಇಟ್ಟುಕೊಂಡಿದ್ದಾರೆ ಎಂಬುದನ್ನು ನೋಡಿ ಬಹಳ ಸಂತೋಷವಾಗುತ್ತಿದೆ’ ಎಂದರು.
ಬೆಳಗಾವಿಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ @DKShivakumar ಅವರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. pic.twitter.com/auI5q3cRrP
— Karnataka Congress (@INCKarnataka) March 28, 2021
ಹೇಳಿಕೆ ಬಗ್ಗೆ ತನಿಖೆ ನಡೆಯಲಿ:
ಇದಕ್ಕೂ ಮುನ್ನ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು, ‘ಯುವತಿ ಪೋಷಕರು ಹೇಳಿಕೆ ಕೊಟ್ಟಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಯುವತಿಯೂ ತಮ್ಮ ಅಬಿಪ್ರಾಯ ಹೇಳಿದ್ದಾರೆ. ಅವರು ಹೇಳಿದ ತಕ್ಷಣ ಅದೇ ನಿಜವಾಗುತ್ತಾ? ತನಿಖೆ ಇಲ್ಲವೇ? ನಿಮ್ಮ ವಿರುದ್ಧ ನಾನು ಕೊಲೆಗಾರ ಎಂದಾಕ್ಷಣ ನೀವು ಕೊಲೆಗಾರ ಆಗುತ್ತೀರಾ? ತನಿಖೆ ಆಗಲಿ. ಪೋಷಕರ ಕೈಯಲ್ಲಿ ಹೇಳಿಕೆ ಕೊಡಿಸ್ತಿದ್ದಾರೆ ಎಂಬ ಬಗ್ಗೆ ನಾನ್ಯಾಕೆ ಹೇಳಲಿ. ಎಲ್ಲ ನಿಮ್ಮ ಮಾಧ್ಯಮದವರೇ ಹೇಳುತ್ತಿದ್ದಾರಲ್ಲಾ? ಬಿಜಾಪುರದಲ್ಲಿದ್ದವರು ಹೇಗೆ ಬೆಳಗಾವಿಗೆ ಬಂದು ದೂರು ಕೊಟ್ಟರು. ಬೆಳಗಾವಿಯಲ್ಲಿ ಅವರಿಗೆ ಯಾರು ಆಶ್ರಯ ಕೊಟ್ಟರು. ನಂತರ ಅವರು ಹೇಗೆ ಬೆಂಗಳೂರಿಗೆ ಬಂದರು ಅಂತಾ ನೀವೇ ತನಿಖೆ ಮಾಡಿ. ಅವಾಚ್ಯ ಪದ ಬಳಕೆ ಬಗ್ಗೆ ನಾನ್ಯಾಕೆ ಮಾನಹಾನಿ ಪ್ರಕರಣ ದಾಖಲಿಸಲಿ.
ನನಗೆ ಯಾವ ಭದ್ರತೆಯೂ ಬೇಕಿಲ್ಲ. ಪೊಲೀಸ್ ಆಯುಕ್ತರಿಗೆ ಪತ್ರ ಬರೆದು, ನಾವೇನೂ ಅಂತಾ ಕೆಲಸ ಮಾಡಿಲ್ಲ, ನಮಗೆ ಭದ್ರತೆ ಬೇಡಾ ಅಂತಾ ಹೇಳಿ. ನನ್ನ ವಿರುದ್ಧ ಪ್ರತಿಭಟನೆ ಮಾಡಬೇಕು, ಮಾಡಲಿ. ಅದೇ ನಮಗೆ ದೊಡ್ಡ ಶಕ್ತಿ. ಭಾರೀ ಘನಕಾರ್ಯ ಮಾಡಿದ್ದೀವಿ ಅಂತಾ ಪ್ರತಿಭಟನೆ ಮಾಡುತ್ತಿದ್ದಾರಾ? ಮಾಡಲಿ ಬಿಡಿ, ಒಳ್ಳೆಯದು.
ಸಂತ್ರಸ್ಥೆ ಯುವತಿ ವಿಚಾರದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ. ತಪ್ಪು ಮಾಡಿದವರು ತಪ್ಪಿಸಿಕೊಳ್ಳಲು ಏನೇನೋ ಮಾಡುತ್ತಿದ್ದಾರೆ, ಯಾರ್ಯಾರನ್ನು ಎಲ್ಲಿಂದಲೋ ಕರೆದುಕೊಂಡು ಬಂದು ಏನೇನು ಹೇಳಿಕೆ ಕೊಡಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇರಲಿ, ಪೊಲೀಸರು ತಮ್ಮ ಗೌರವ ಕಾಪಾಡಿಕೊಳ್ಳಲಿ ಅಂತಾ ನಾನು ಮನವಿ ಮಾಡುತ್ತೇನೆ. ಸದ್ಯಕ್ಕೆ ಚುನಾವಣೆಗಾಗಿ ಪ್ರವಾಸ ಮಾಡುತ್ತಿದ್ದು, ಎಲ್ಲರೂ ಸೇರಿ ಚುನಾವಣೆ ಮಾಡೋಣ.’