ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಸ್ ಯಾತ್ರೆಗೆ (Congress Bus Yatra) ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಮಾಹಿತಿ ನೀಡಿದ್ದು, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್ ಈ ಕೆಳಗಿನಂತಿದೆ ನೋಡಿ.
ಇದನ್ನೂ ಓದಿ: Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ
ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ. ಬೆಳಗಾವಿಯಲ್ಲೇ ಕಾಂಗ್ರೆಸ್ನ ಪ್ರಥಮ ಅಧಿವೇಶನ ನಡೆದಿತ್ತು. ಹಾಗಾಗಿ ಬೆಳಗಾವಿಯಿಂದ ಬಸ್ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಸ್ ಯಾತ್ರೆ ವೇಳಾಪಟ್ಟಿ ಇಲ್ಲಿದೆ
* ಜನವರಿ 11ರಂದು ಬೆಳಗಾವಿ ಜಿಲ್ಲೆ
* ಜನವರಿ 16ರಂದು ಹೊಸಪೇಟೆ
* ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ
* ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ
* ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ
* ಜನವರಿ 21 ಹಾಸನ, ಚಿಕ್ಕಮಗಳೂರು
* ಜನವರಿ 22 ಉಡುಪಿ, ದಕ್ಷಿಣ ಕನ್ನಡ.
* ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ
* ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ
* ಜನವರಿ 25 ಚಾಮರಾಜನಗರ, ಮೈಸೂರು
* ಜನವರಿ 26 ಮಂಡ್ಯ ಮತ್ತು ರಾಮನಗರ
* ಜನವರಿ 27 ಯಾದಗಿರಿ-ಕಲಬುರಗಿ
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ