ಮಸ್ಕಿ:
ಮಸ್ಕಿ ಉಪಚುನಾವಣೆಯ ಮತಗಳ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಗೆಲವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 22,914, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ 35,901 ಮತಗಳನ್ನು ಪಡೆದರು.
ಸೋಲುವುದು ನಿಶ್ಚಿತ ಎನ್ನುವುದನ್ನು ಅರಿತು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರು ಮತ ಎಣಿಕೆ ಕೇಂದ್ರದಿಂದ ಹೊರ ನಡೆದರು.
ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್ ಅವರು, ‘ಸೋಲಿಗೆ ಏನು ಕಾರಣ ಎಂಬುದು ಆನಂತರ ಪಕ್ಷದ ಹಿರಿಯರು ಕುರಿತು ಚರ್ಚಿಸಲಿದ್ದಾರೆ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ’ ಎಂದರು.