Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • “ಬೆಲೆಯೇರಿಕೆ ಮುಕ್ತ ಭಾರತ”ಕ್ಕೆ ಕಾಂಗ್ರೆಸ್ ಆಗ್ರಹ
  • ಬೆಂಗಳೂರು ನಗರ
  • ರಾಜಕೀಯ

“ಬೆಲೆಯೇರಿಕೆ ಮುಕ್ತ ಭಾರತ”ಕ್ಕೆ ಕಾಂಗ್ರೆಸ್ ಆಗ್ರಹ

The Bengaluru Live March 31, 2022 1:00 PM 1 minute read
Congress demands Inflation-free India

“ಬೆಲೆಯೇರಿಕೆ ಮುಕ್ತ ಭಾರತ”ಕ್ಕೆ ಕಾಂಗ್ರೆಸ್ ಆಗ್ರಹ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಪೆಟ್ರೋಲ್, ಡಿಸೇಲ್, ಎಲ್ಪಿಜಿ, ಸಿನ್ ಜಿ ಮತ್ತು ಪಿಎನ್ ಜಿ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ವಿರುದ್ಧ ಎಐಸಿಸಿ ದೇಶಾದ್ಯಂತ ಹಮ್ಮಿಕೊಂಡಿರುವ “ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ”ದ ಭಾಗವಾಗಿ ಕೆಪಿಸಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದಿರು ಗುರುವಾರ ಪ್ರತಿಭಟನೆ ನಡೆಸಿತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೇ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಮತ್ತಿತರ ಮುಖಂಡರು ಭಾಗವಹಿದ್ದರು.

ದ್ವಿಚಕ್ರ ವಾಹನ ಹಾಗೂ ಅಡುಗೆ ಅನಿಲ ಸಿಲಿಂಡರ್ ಗೆ ಹೂವಿನ ಹಾರ ಹಾಕಿ ಪೂಜೆ ಮಾಡಿ ಪ್ರತಿಭಟನೆ ನಡೆಸಿದರು.

Congress demands Inflation-free India

ಇದಕ್ಕೂ ಮೊದಲು ಶಿವಕುಮಾರ್ ಅವರು ಬೆಳಗ್ಗೆ ತಮ್ಮ ಸದಾಶಿವನಗರದ ನಿವಾಸದ ಬಳಿ ಅಡುಗೆ ಅನಿಲದ ಸಿಲಿಂಡರ್ ಗೆ ಹೂಹಾರ ಹಾಕಿ, ಚಪ್ಪಾಳೆ ತಟ್ಟುವ ಮೂಲಕ ಪ್ರತಿಭಟನೆ ಮಾಡಿದರು. ನಂತರ ಕೆಪಿಸಿಸಿ ಕಚೇರಿಯಲ್ಲಿ ದ್ವಿಚಕ್ರ ವಾಹನ ಹಾಗೂ ಅಡುಗೆ ಸಿಲಿಂಡರ್ ಗೆ ಗಂಟೆ ಬಾರಿಸಿ ಪೂಜೆ ಮಾಡಿದರು.

‘ಇಂದು ಮಾರ್ಚ್ 31 ಆರ್ಥಿಕ ವರ್ಷ ಮುಕ್ತಾಯದ ದಿನ. ಹೀಗಾಗಿ ಇಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಕಳೆದ 11 ದಿನಗಳಲ್ಲಿ ಕೇಂದ್ರ ಸರ್ಕಾರ 10 ಬಾರಿ ಇಂಧನ ಬೆಲೆ ಏರಿಕೆ ಮಾಡಿದೆ. ದಿನನಿತ್ಯ ಜನರ ಜೇಬು ಪಿಕ್ ಪಾಕೇಟ್ ಆಗುತ್ತಿದೆ.

ಎಲ್ಲರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಸರ್ಕಾರ, ಬೆಲೆ ಏರಿಕೆ ಗಗನಕ್ಕೇರಿದೆ. ಆದಾಯ ಪಾತಳಕ್ಕೆ ಹೋಗಿದೆ. ಹೀಗಾಗಿ ನಾವು ಈ ಪ್ರತಿಭಟನೆ ಮಾಡುತ್ತಿದ್ದೇವೆ. ವಾಹನ ಸವಾರರಿಂದ ಹಿಡಿದು, ಗೃಹಿಣಿಯವರೆಗೂ ಎಲ್ಲರೂ ದಿನನಿತ್ಯ ನೋವು ಅನುಭಿಸುತ್ತಿದ್ದಾರೆ. ಈಗಾಗಲೇ ಸುಮಾರು 35 ರೂ. ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ 111 ರೂ. ಮುಟ್ಟಿದೆ. ಇದರ ವಿರುದ್ಧ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದ್ದು, ನಮ್ಮ ಮನೆಗಳ ಮುಂದೆ ಅಡುಗೆ ಅನಿಲ ಸಿಲಿಂಡರ್, ವಾಹನಗಳಿಗೆ ಹೂವಿನ ಹಾರ ಹಾಕಿ ಪೂಜೆ ಮಾಡಿದ್ದೇವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ @siddaramaiah, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ @HariprasadBK2, ಕೆಪಿಸಿಸಿ ಕಾರ್ಯಧ್ಯಕ್ಷರಾದ @RLR_BTM, @SaleemAhmadINC, @DhruvanarayanaR ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. pic.twitter.com/qIHjcsjR0R

— Karnataka Congress (@INCKarnataka) March 31, 2022

ಕಾಂಗ್ರೆಸ್ ಕಚೇರಿ ಮುಂದೆ ನಾನು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ನಮ್ಮ ಕಾರ್ಯಾಧ್ಯಕ್ಷರುಗಳು, ಎಐಸಿಸಿ ನಾಯಕರು ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಜನ ದಡ್ಡರಲ್ಲ. ಅವರು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಅವಕಾಶ ಸಿಕ್ಕಾಗ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಮೂಲಕ ಅವರ ದಿನನಿತ್ಯದ ನೋವನ್ನು ಹೊರಹಾಕಲಿದ್ದಾರೆ ಎಂಬ ನಂಬಿಕೆ ಇದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ.’

ಪಂಚರಾಜ್ಯ ಚುನಾವಣೆ ನಡೆಯುವಾಗ ತಡೆಯಲಾಗಿದ್ದ ಬೆಲೆ ಏರಿಕೆ, ಫಲಿತಾಂಶ ಬಂದ ನಂತರ ಮತ್ತೆ ಆರಂಭವಾಗಿದೆಯೇ ಎಂಬ ಪ್ರಶ್ನೆಗೆ, ‘ಅವರು ತಡೆ ಹಿಡಿದಿದ್ದರೋ ಇಲ್ಲವೋ, ಜನರಿಗಂತೂ ಪ್ರಾಣ ಹಿಂಡುತ್ತಿದ್ದಾರೆ. ನಮ್ಮ ಹಳ್ಳಿಕಡೆ ಒಂದು ಮಾತಿದೆ. 100 ಚಪ್ಪಲಿ ಏಟು ತಿನ್ನಬಹುದು, ಆದರೆ ದುಡ್ಡಿನ ಏಟು ಮಾತ್ರ ತಡೆಯಲು ಆಗುವುದಿಲ್ಲ. ಅದೇ ರೀತಿ ಈ ಸರ್ಕಾರ ದಿನನಿತ್ಯ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ’ ಎಂದು ಉತ್ತರಿಸಿದರು.

ಬಿಜೆಪಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೇಬನ್ನು ಪಿಕ್ ಪಾಕೆಟ್ ಮಾಡುತ್ತಿದೆ.

ಇದರ ವಿರುದ್ಧ ನಾವು ನಮ್ಮ ಮನೆಗಳ ಮುಂದೆ ಹಾಗೂ ಪಕ್ಷದ ಕಚೇರಿ ಮುಂದೆ ವಿನೂತನ ಪ್ರತಿಭಟನೆ ಮಾಡಿದ್ದೇವೆ.

ಬಿಜೆಪಿ ಸರ್ಕಾರ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದು, ಜನ ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ.
– @DKShivakumar pic.twitter.com/DNmGzhaQT8

— Karnataka Congress (@INCKarnataka) March 31, 2022

ಜನರ ಸಮಸ್ಯೆಗಳ ಬದಲು ಭಾವನಾತ್ಮಕ ವಿಚಾರ ಚುನಾವಣೆ ಅಜೆಂಡಾ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ‘ಅವರು ಸಮಾಜ ಒಡೆಯುವವರಾದರೆ, ನಾವು ಸಮಾಜವನ್ನು ಒಂದು ಮಾಡುತ್ತೇವೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ’ ಎಂದು ಉತ್ತರಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಜೆಇಇ, ನೀಟ್, ಸಿಇಟಿಗೆ ನೆರವು ನೀಡುವ `ಗೆಟ್ ಸೆಟ್ ಗೋ’ ಉಪಕ್ರಮಕ್ಕೆ ಚಾಲನೆ
Next: ಸಿಲಿಕಾನ್‌ ಸಿಟಿಯ ಹೈಟೆಕ್‌ ನಾಗರಿಕರಿಗೆ ಶಾಸಕರ ಅಪ್‌ ಬಿಡುಗಡೆ

Related Stories

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಬೆಂಗಳೂರು ನಗರ

ಬೆಂಗಳೂರು ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ; ಐದು ಆಯುಕ್ತಾಲಯಗಳಿಗೆ ಅಧಿಕಾರಿಗಳು

The Bengaluru Live November 18, 2026 5:47 PM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM

Latest Post

ಬೆಂಗಳೂರು ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ; ಐದು ಆಯುಕ್ತಾಲಯಗಳಿಗೆ ಅಧಿಕಾರಿಗಳು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಬೆಂಗಳೂರು ನಗರ

ಬೆಂಗಳೂರು ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ; ಐದು ಆಯುಕ್ತಾಲಯಗಳಿಗೆ ಅಧಿಕಾರಿಗಳು

November 18, 2026 5:47 PM
ಕಾವೇರಿ 2.0: ಜನವರಿ 10ರಿಂದ ಎಲ್ಲ 256 ಕಚೇರಿಗಳಲ್ಲಿ ಕಾಗದರಹಿತ ಆಸ್ತಿ ನೋಂದಣಿ ಎಂದು ಕರ್ನಾಟಕ ಸರ್ಕಾರ ಮಾಹಿತಿ ಬೆಂಗಳೂರಿನ ವಿಧಾನಸೌಧದ ಮುಂಭಾಗದ ನೋಟ — ಕಡತ ಚಿತ್ರ
  • ಕರ್ನಾಟಕ
  • ರಿಯಲ್ ಎಸ್ಟೇಟ್

ಕಾವೇರಿ 2.0: ಜನವರಿ 10ರಿಂದ ಎಲ್ಲ 256 ಕಚೇರಿಗಳಲ್ಲಿ ಕಾಗದರಹಿತ ಆಸ್ತಿ ನೋಂದಣಿ ಎಂದು ಕರ್ನಾಟಕ ಸರ್ಕಾರ ಮಾಹಿತಿ

November 18, 2026 4:17 PM
ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

November 18, 2026 2:02 PM
ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

November 18, 2026 10:49 AM
ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಬೆಂಗಳೂರು ನಗರ

ಬೆಂಗಳೂರು ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ; ಐದು ಆಯುಕ್ತಾಲಯಗಳಿಗೆ ಅಧಿಕಾರಿಗಳು

The Bengaluru Live November 18, 2026 5:47 PM
ಬೆಂಗಳೂರಿನ ವಿಧಾನಸೌಧದ ಮುಂಭಾಗದ ನೋಟ — ಕಡತ ಚಿತ್ರ
  • ಕರ್ನಾಟಕ
  • ರಿಯಲ್ ಎಸ್ಟೇಟ್

ಕಾವೇರಿ 2.0: ಜನವರಿ 10ರಿಂದ ಎಲ್ಲ 256 ಕಚೇರಿಗಳಲ್ಲಿ ಕಾಗದರಹಿತ ಆಸ್ತಿ ನೋಂದಣಿ ಎಂದು ಕರ್ನಾಟಕ ಸರ್ಕಾರ ಮಾಹಿತಿ

The Bengaluru Live November 18, 2026 4:17 PM
ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

The Bengaluru Live November 18, 2026 2:02 PM
ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ; ಐದು ಆಯುಕ್ತಾಲಯಗಳಿಗೆ ಅಧಿಕಾರಿಗಳು
  • ಕಾವೇರಿ 2.0: ಜನವರಿ 10ರಿಂದ ಎಲ್ಲ 256 ಕಚೇರಿಗಳಲ್ಲಿ ಕಾಗದರಹಿತ ಆಸ್ತಿ ನೋಂದಣಿ ಎಂದು ಕರ್ನಾಟಕ ಸರ್ಕಾರ ಮಾಹಿತಿ
  • ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ
  • ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
©Copyright 2025 The Bengaluru Live All rights reserved. | MoreNews by AF themes.