ಬೆಂಗಳೂರು:
ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಡೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿದ್ದು, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಲಾಗಿತ್ತು.
ಕಳೆದು ಮಂಗಳವಾರವಷ್ಟೇ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಬಲೆಗೆ ಸಂಪತ್ ರಾಜ್ ಬಿದ್ದಿದ್ದು, ಅಂತಿಮವಾಗಿ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.