Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ದರ್ಪ; ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ: ವಿಜಯೇಂದ್ರ
  • ರಾಜಕೀಯ
  • ಕರ್ನಾಟಕ
  • ಬೆಂಗಳೂರು ನಗರ

ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ದರ್ಪ; ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ: ವಿಜಯೇಂದ್ರ

The Bengaluru Live April 3, 2025 5:30 PM 1 minute read
congress-government-is-intoxicated-with-power:-vijayendra

ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ದರ್ಪ; ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ: ವಿಜಯೇಂದ್ರ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಈ ಸರಕಾರಕ್ಕೆ ಬಡವರೂ ಬೇಡ; ರೈತರೂ ಬೇಡ. ರಾಜ್ಯದಲ್ಲಿ ಯಾವ ಸಮಾಜಕ್ಕೂ ನ್ಯಾಯ ಕೊಡುವ ಕಾಳಜಿ ಇಲ್ಲದ ಸರಕಾರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ ಎಂದು ಅವರು ಆಕ್ಷೇಪಿಸಿದರು. ಜನಪರ ಕಾಳಜಿ ಇದ್ದಲ್ಲಿ ಈ ರೀತಿ ಬೆಲೆ ಏರಿಕೆ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯನವರೇ ನಿಮ್ಮ ಸರಕಾರ ಅಧಿಕಾರದ ಅಮಲಿನಲ್ಲಿದೆ. ಈ ಅಧಿಕಾರದ ದರ್ಪ- ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂದು ಎಚ್ಚರಿಸಿದರು. ನಿಮ್ಮ ಅಧಿಕಾರದ ಸೊಕ್ಕನ್ನು ಇಳಿಸುವ ಶಕ್ತಿ ಬಿಜೆಪಿಗೆ ಇದೆ. ನಿಮ್ಮ ದರ್ಪ ಇಳಿಸುವ ಶಕ್ತಿ ಈ ನಾಡಿನ ಮತದಾರರಿಗೆ ಇದೆ ಎಂದು ತಿಳಿಸಿದರು. ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಸುವ ಪ್ರಶ್ನೆಯೇ ಇಲ್ಲ; ನಿನ್ನೆಯಿಂದ ಪ್ರಾರಂಭವಾದ ಅಹೋರಾತ್ರಿ ಧರಣಿ ಇವತ್ತಿಗೆ ಮುಕ್ತಾಯವಾಗುತ್ತಿಲ್ಲ; ಏ. 5ರಂದು ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಹೋರಾಟ ನಡೆಯಲಿದೆ. ಏ.7ರಿಂದ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಈ ಭ್ರಷ್ಟ, ದುಷ್ಟ ಬಡವಿರೋಧಿ, ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಮೈಸೂರಿನಿಂದ ಆರಂಭಿಸುತ್ತೇವೆ ಎಂದು ತಿಳಿಸಿದರು.

ಪಪ್ರತಿ ಜಿಲ್ಲೆಗೂ ಬರಲಿದ್ದೇವೆ. ನಾಡಿನ ಜನತೆ, ಬಡವರ, ರೈತರ ಧ್ವನಿ ಆಗುವ ಹಾಗೂ ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕಿದೆ. ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಸಹಕರಿಸಲು ವಿನಂತಿಸಿದರು.

ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜನಸಾಮಾನ್ಯರನ್ನು ಶೋಷಿಸುವ ಪರಿಯಲ್ಲಿ ನಿರಂತರ ಬೆಲೆ ಏರಿಕೆಯ ವಿರುದ್ಧ ‘ಬಿಜೆಪಿ-ಕರ್ನಾಟಕ’ಸಂಘಟಿಸಿದ್ದ ‘24 ಗಂಟೆಗಳ ಅಹೋ ರಾತ್ರಿ ಧರಣಿ ಸತ್ಯಾಗ್ರಹ’ ಸಂಪನ್ನಗೊಂಡು ರಾಜ್ಯದ ಜನರ ಗಮನಸೆಳೆಯುವಲ್ಲಿ ಸಫಲವಾಗಿ ,ಹೋರಾಟ ಅತ್ಯಂತ ಯಶಸ್ವಿಯಾಗಲು ಕಾರಣೀಕರ್ತರಾದ, ವಿರೋಧ ಪಕ್ಷದ ಉಭಯ ಸದನಗಳ ನಾಯಕರು, ಪಕ್ಷದ… pic.twitter.com/cyaFBvryqi

— Vijayendra Yediyurappa (@BYVijayendra) April 3, 2025

ಸಿದ್ದರಾಮಯ್ಯರಿಗೆ ನಟ್ಟು, ಬೋಲ್ಟ್ ಟೈಟ್ ಮಾಡಿದ್ದೀರಾ.. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಡಿ.ಕೆ.ಶಿವಕುಮಾರ್ ಅವರೇ ನಿಮ್ಮ ಪಕ್ಷದಲ್ಲಿರುವ ಸಿದ್ದರಾಮಯ್ಯರಿಗೆ ನಟ್ಟು, ಬೋಲ್ಟ್ ಟೈಟ್ ಮಾಡಿದ್ದೀರಾ ಎಂದು ಪ್ರಶ್ನಿಸಿದರು. ಯಾವಾಗ ಮಾಡುತ್ತೀರಿ ಎಂದು ವ್ಯಂಗ್ಯವಾಗಿ ಕೇಳಿದರು.

ನೀವು ನಟ್ಟು, ಬೋಲ್ಟ್ ಬಿಚ್ತೀರಾ? ಟೈಟ್ ಮಾಡುತ್ತೀರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಮುಖ್ಯಮಂತ್ರಿಗಳೇ, ನಿಮ್ಮದು ಟೈಟ್ ಆಗ್ತ ಇಲ್ಲ; ಲೂಸ್ ಆಗ್ತ ಇದೆ ಎಂದು ತಿಳಿಸಿದರು.

ನೀವು ಗ್ಯಾರಂಟಿಗಳನ್ನೂ ಸರಿಯಾಗಿ ತಲುಪಿಸಿಲ್ಲ; ಬೆಲೆ ಏರಿಕೆ ಮಾಡಿದ್ದು ದುಡ್ಡು ಹೊಡೆಯಲಿಕ್ಕೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಸತ್ಯ ಒಪ್ಪಿಕೊಂಡರೆ ನಿಮ್ಮ ಶಿಕ್ಷೆ ಕಡಿಮೆ ಆಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.

About the Author

The Bengaluru Live

Administrator

Visit Website View All Posts

Post navigation

Previous: Nandini Milk | ನಂದಿನಿ ಹಾಲಿನ ಬೆಲೆ ಏರಿಕೆ: ಏಪ್ರಿಲ್ 1 ರಿಂದ ಲೀಟರ್‌ಗೆ 4 ರೂ. ಹೆಚ್ಚಳ ಘೋಷಣೆ
Next: Bengaluru | ಮನೆಗೆ ನುಗ್ಗಿದ ಚಿರತೆಯನ್ನು ಬಲೆಗೆ ಬೀಳಿಸುವಲ್ಲಿ ದಂಪತಿಗಳು ಯಶಸ್ವಿ

Related Stories

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.