Home ರಾಜಕೀಯ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭ: ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭ: ಸಿದ್ದರಾಮಯ್ಯ

76
0
Congress government's first budget session to begin from July 3: Siddaramaiah
Advertisement
bengaluru

ದಾವಣಗೆರೆ:

ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ನೂತನ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದೆ.

ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜುಲೈ 7 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಭಾಷಣ ಮಾಡಲಿದ್ದಾರೆ.

ಈ ಬಾರಿಯ ಬಜೆಟ್ ಗಾತ್ರದ ಬಗ್ಗೆ ಬಜೆಟ್ ಸಿದ್ಧತೆಗಳ ಸಭೆ ಪ್ರಾರಂಭವಾದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಹಿಂದಿನ ಸರ್ಕಾರ 39782 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದರು ಎಂದರು.

bengaluru bengaluru

ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮಾತನಾಡಿ, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. 1964 ಕಾಯ್ದೆಯಲ್ಲಿ 12 ವರ್ಷ ತುಂಬಿರುವ ಬರಡು ಹಾಗೂ ವ್ಯವಸಾಯಕ್ಕೆ ಉಪಯೋಗವಿಲ್ಲದ ರಾಸುಗಳ ಬಗ್ಗೆ ಹೇಳಲಾಗಿದೆ. ಆಮೇಲೆ ತಿದ್ದುಪಡಿಯಾಗಿದೆ ಎಂದರು.

ರೈತರಿಗೆ ತೊಂದರೆಯಾಗದಂತೆ ಬೀಜ ಗೊಬ್ಬರಗಳ ಸರಬರಾಜು ಆಗಬೇಕೆಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ವೀಡಿಯೋ ಸಂವಾದದ ಮುಖಾಂತರ ತಿಳಿಸಲಾಗಿದೆ. ಪ್ರವಾಹ ಉಂಟಾದರೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದೆ ಎಂದರು.

ವಿದ್ಯುತ್ ದರ ಏರಿಕೆ

ವಿದ್ಯುತ್ ದರ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ವಿದ್ಯುತ್ ದರ ಏರಿಕೆ ಆರ್.ಇ.ಸಿ ನಲ್ಲಿ ಮೊದಲೇ ತೀರ್ಮಾನವಾಗಿದೆ. ಹಿಂದೆಯೇ ಆಗಿದ್ದ ತೀರ್ಮಾನವನ್ನು ಈಗ ಜಾರಿ ಮಾಡಲಾಗಿದೆ ಎಂದರು.

ಇಂದಿರಾ ಕ್ಯಾಂಟೀನ್‍

ಇಂದಿರಾ ಕ್ಯಾಂಟೀನ್‍ಗಳನ್ನು ಪುನರಾರಂಭಿಸಲು ಸಿದ್ಧತೆಗಳನ್ನು ಮಾಡಲು ಸೂಚಿಸಲಾಗಿದೆ. ಕ್ಯಾಂಟೀನುಗಳ ನೌಕರರಿಗೆ ವೇತನ ದೊರೆತಿಲ್ಲವಾದರೆ ಅಥವಾ ಬಾಕಿ ಇದ್ದರೆ ಅದನ್ನು ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಕಾಕತಾಳೀಯ

ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಚರಣೆಯನ್ನು ಮಾಡಲಾಗಿತ್ತು. ಕಾಕತಾಳೀಯವೆಂಬಂತೆ ಮುಖ್ಯಮಂತ್ರಿಯಾಗಿ ಮೊದಲನೇ ಪ್ರವಾಸ ದಾವಣಗೆರೆ ಜಿಲ್ಲೆಗೆ ಹಮ್ಮಿಕೊಳ್ಳಲಾಗಿದೆ ಎಂದರು.


bengaluru

LEAVE A REPLY

Please enter your comment!
Please enter your name here