
Congress has lost in entire country; This is not Modi's defeat: Bommai
ಬೆಂಗಳೂರು:
ಕಾಂಗ್ರೆಸ್ ಇಡೀ ದೇಶದಲ್ಲಿ ಸೋತಿದೆ. ಇದು ಮೋದಿಯವರ ಸೋಲಲ್ಲ. ಮೋದಿಯವರು ಕೇವಲ ಇಲ್ಲಿ ಪ್ರಚಾರಕ್ಕೆ ಬಂದಿದ್ದರು ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಬಿಜೆಪಿ ಕಚೇರಿಯಲ್ಲಿ ಪ್ರಮುಖರು ಎಲ್ಲರು ಸೇರಿ, ಬಹಳ ದೀರ್ಘವಾಗಿ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಪಲಿತಾಂಶದ ಬಗ್ಗೆ ಬೇರೆ ಬೇರೆ ಕಡೆಯಿಂದ ಇನ್ನಷ್ಟು ಮಾಹಿತಿ ತರಿಸಿಕೊಂಡು ಚರ್ಚೆ ಮಾಡುತ್ತೇವೆ. ಒಟ್ಟಾರೆ ಪಲಿತಾಂಶದ ಬಗ್ಗೆ ಹಾಗೂ ವಿಧಾನಸಭೆ ಕ್ಷೇತ್ರವಾರು ಪರಾಮರ್ಶೆ ಮಾಡಬೇಕಿದೆ ಎಂದರು.
ನಮ್ಮ ಬಿಜೆಪಿ ಅಧ್ಯಕ್ಷರು ಇನ್ನು ಮೂರು ನಾಲ್ಕು ದಿನಗಳೊಳಗೆ ಚುನಾಯಿತ ಪ್ರತಿನಿಧಿಗಳ ಸಭೆ ಕರೆಯುತ್ತಿದ್ದಾರೆ. ಮರುದಿನ ಎಲ್ಲಾ ಅಭ್ಯರ್ಥಿಗಳ ಸಭೆ ಕರೆದು ಚರ್ಚೆ ಮಾಡಲಿದ್ದು, ಅಲ್ಲಿ ಕೂಲಂಕುಷವಾಗಿ ಚರ್ಚೆ ಮಾಡಿ, ಯಾವ ರೀತಿ ಒಗ್ಗಟ್ಡಾಗಿ ಪಕ್ಷ ಬಲವರ್ಧನೆ ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ನಮಗೆ ಪಕ್ಷ ಸಂಘಟನೆಗೆ ವಿಶ್ರಮ ಇರುವುದಿಲ್ಲ. ಲೋಕಸಭೆ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಬಿಜೆಪಿಯ ಸೋಲು ಮೋದಿಯ ಸೋಲು ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅವರು, ಕಾಂಗ್ರೆಸ್ ನ ನಾಯಕತ್ವ ಇಡೀ ದೇಶದಲ್ಲಿ ಸೋತಿದೆ. ಮೋದಿಯವರು ರಾಷ್ಟ್ರೀಯ ನಾಯಕರು. ಇಲ್ಲಿ ಮೋದಿಯವರು ಪ್ರಚಾರಕ್ಕಷ್ಟೇ ಬಂದಿದ್ದರು. ಇದು ಅವರ ಸೋಲು ಅನ್ನುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ನಲ್ಲಿ ಸಿಎಂಗಾಗಿ ಸಿದ್ದು ಡಿಕೆಶಿ ನಡುವೆ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರಿಗೂ ಶುಭಾಶಯ ಕೋರಿದ ಬೊಮ್ಮಾಯಿಯವರು, ನಗುತ್ತಲೇ ಅವರಿಬ್ಬರೂ ಆಲ್ ದಿ ಬೆಸ್ಟ್ ಎಂದರು.
ಈ ವೇಳೆ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯ ಭರವಸೆಗಳ ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲು ಕಾಂಗ್ರೆಸ್ ನವರು ಸರ್ಕಾರ ಮಾಡಲಿ. ಆ ನಂತರ ಕ್ಯಾಬಿನೆಟ್ ಕರೆದು ಏನು ಮಾಡುತ್ತಾರೆ ಎಂದು ನೋಡೋಣ ಎಂದು ಹೇಳಿದರು.