Home ರಾಜಕೀಯ ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ- ವೀರಪ್ಪ ಮೊಯ್ಲಿ

ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ- ವೀರಪ್ಪ ಮೊಯ್ಲಿ

74
0
Congress has no proposal to ban Bajrang Dal - Veerappa Moily

ಉಡುಪಿ:

ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪಿಸಿರುವ ಕಾಂಗ್ರೆಸ್ ಪ್ರಣಾಳಿಕೆಯ ವಿರುದ್ಧ ಸಂಘಪರಿವಾರದಿಂದ ತೀವ್ರ ಪ್ರತಿಭಟನೆಯ ನಡುವೆ, ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವ ಯಾವುದೇ ಪ್ರಸ್ತಾಪವನ್ನು ಮಾಡಿಲ್ಲ ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ವಿರುದ್ಧ ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಅವಲೋಕನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳದಂತಹ ಸಂಘಟನೆಗಳ ವಿರುದ್ಧ ಕ್ರಮವನ್ನು ಉಲ್ಲೇಖಿಸಲಾಗಿದೆ. ಇಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಈಗ ಆರಾಧಿಸುತ್ತಿರುವ ಬಿಜೆಪಿ, ಪಟೇಲ್ ಒಂದು ಹಂತದಲ್ಲಿ ಆರ್‌ಎಸ್‌ಎಸ್ ನಿಷೇಧಿಸಿದ್ದರು ಎಂಬುದನ್ನು ಮರೆತಿದೆ. ತದನಂತರ ಜವಾಹರ್ ಲಾಲ್ ನೆಹರೂ ನಿಷೇಧ ನಿರ್ಧಾರವನ್ನು ರದ್ದುಗೊಳಿಸಿದರು.”ದ್ವೇಷ ರಾಜಕಾರಣದ ಬಗ್ಗೆ ಸುಪ್ರೀಂ ಕೋರ್ಟ್‌ನ ನಿಲುವು ಸ್ಪಷ್ಟವಾಗಿದೆ. ಅದರ ಭಾಗವಾಗಿ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿಕೆ ನೀಡಿದ್ದೇವೆ. ಆದರೆ ಬಜರಂಗದಳವನ್ನು ನಿಷೇಧಿಸುವ ಉದ್ದೇಶ ನಮಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಸ್ಪಷ್ಟಪಡಿಸಿದ್ದಾರೆ ಎಂದು ಮೊಯ್ಲಿ ತಿಳಿಸಿದರು.

ಇದೇ ವೇಳೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ವಕ್ತಾರ ಗೌರವ್ ವಲ್ಲಭ್, ಪ್ರಧಾನಿ ನರೇಂದ್ರ ಮೋದಿ ಅವರು ಹನುಮಂತ ದೇವರನ್ನು ಬಜರಂಗದಳಕ್ಕೆ ಹೋಲಿಸುವ ಮೂಲಕ ಹನುಮಂತನ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದು, ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here