ರಾಮನಗರ:
ಮೇ 15 ರಂದು ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನತೆಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಜಾರಿಗೊಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ರಾಮನಗರದಲ್ಲಿ ಸೋಮವಾರ ನಡೆದ ಸಮಾವೇಶದಲ್ಲಿ ಡಿಕೆ.ಶಿವಕುಮಾರ್ ಅವರು ಪಕ್ಷದ ಅಭ್ಯರ್ಥಿ ಇಕ್ಬಾಲ್ ಹುಸೇನ್ ಪರ ಚುನಾವಣಾ ಪ್ರಚಾರ ನಡೆಸಿದರು.
ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿ ಸ್ಥಾನ ಕುರಿತು ಮಲ್ಲಿಕಾರ್ಜುನ ಖರ್ಗೆಯವರೇ ನಿರ್ಧರಿಸುತ್ತಾರೆಂದು ಊಹಾಪೋಹಗಳಿಗೆ ತೆರೆ ಎಳೆದರು.
ರಾಮನಗರದಲ್ಲಿ ನೆರೆದ ಜನಸ್ತೋಮವು ಕಾಂಗ್ರೆಸ್ ಗೆಲುವಿನ ಘೋಷಣೆಯನ್ನು ಮುಗಿಲೆತ್ತರಕ್ಕೇರಿಸಿದೆ. ಎಲ್ಲೆಲ್ಲೂ ಹಾರಾಡಿದ ಕಾಂಗ್ರೆಸ್ ಬಾವುಟವು ನಮ್ಮ ಜಯಭೇರಿಗೆ ಬರೆದ ಮುನ್ನುಡಿಯಾಗಿದೆ.
— DK Shivakumar (@DKShivakumar) May 8, 2023
ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ.#KarnatakaWantsCongress #KarnatakaAssemblyElection2023 pic.twitter.com/nTaGeBIZ4p
ಬಿಜೆಪಿಯನ್ನು ಗುರಿಯಾಗಿಸಿಕೊಂಡು ಜಾಹೀರಾತು ನೀಡಿದ್ದಕ್ಕಾಗಿ ಚುನಾವಣಾ ಆಯೋಗ ನೀಡಿದ್ದ ನೋಟಿಸ್’ಗೆ ಉತ್ತರ ನೀಡಲಾಗಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ಸೃಷ್ಟಿಯಾಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದರು. ಅವರ ಹೇಳಿಕೆ ಕುರಿತು ಇಸಿಐ ನೋಟಿಸ್ ಜಾರಿ ಮಾಡಲಿದೆಯೇ” ಎಂದು ಇದೇ ವೇಳೆ ಪ್ರಶ್ನಿಸಿದ್ದಾರೆ.
ಅಧಿಕಾರದಲ್ಲಿರುವ ರಾಜ್ಯ ಸರ್ಕಾರವು ರಾಜ್ಯದಲ್ಲಿ ಸಮರ್ಥವಾಗಿ ಆಡಳಿತ ನಡೆಸಲು ಸಾಧ್ಯವಾಗದ ಕಾರಣ ಮೋದಿಯವರು ಕರ್ನಾಟಕದಲ್ಲಿ ಪ್ರಚಾರ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆಂದು ವ್ಯಂಗ್ಯವಾಡಿದರು