Home ಬೆಳಗಾವಿ ಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರುಗಳ ಮೇಲೆ ಐಟಿ ದಾಳಿ: ಲಕ್ಷ್ಮಿ ಹೆಬ್ಬಾಳ್ಕರ್

ಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರುಗಳ ಮೇಲೆ ಐಟಿ ದಾಳಿ: ಲಕ್ಷ್ಮಿ ಹೆಬ್ಬಾಳ್ಕರ್

22
0
Congress Leader Lakshmi Hebbalkar fears of IT raids on Congress-JDS Leaders in Karnataka
Congress Leader Lakshmi Hebbalkar fears of IT raids on Congress-JDS Leaders in Karnataka

ಬೆಳಗಾವಿ:

ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ , ತಮ್ಮ ಮೇಲೆ ಲೋಕಾಯುಕ್ತ ಮತ್ತು ಐಟಿ ದಾಳಿ ನಡೆಯಲಿದೆ ಎಂಬ ವಿಷಯವನ್ನು ತಿಳಿಸಿದ್ದಾರೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ 10 ದಿನ ಉಳಿದಿದೆ. ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ ಪರವಾದ ವಾತಾವರಣ ಇದೆ. ರಾಜ್ಯದ ಮತದಾರರು ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜನ ಭರವಸೆ ಇಟ್ಟಿದ್ದಾರೆ. ಬಿಜೆಪಿ ಹತಾಶೆಯಿಂದ ವಾಮಮಾರ್ಗ ಹಿಡಿಯುವಂತ ಸುದ್ದಿ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.

ಅಭ್ಯರ್ಥಿಗಳು ಮತ್ತು ಅವರ ಸಂಬಂಧಿಕರ ಮೇಲೆ 50 ಜನರ ಮೇಲೆ ಲೋಕಾಯುಕ್ತ, ಐಟಿ ದಾಳಿ ಸಂಬಂಧ ಇದೆ. ಇದರಿಂದಾಗಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಒಂದು, ಎರಡು ದಿನದಲ್ಲಿ ದಾಳಿಯ ಮೂನ್ಸುಚನೆ ಸಿಕ್ಕಿದೆ ಎಂದು ಸ್ಫೋಟಕ ವಿಷಯವನ್ನು ತಿಳಿಸಿದರು.

ವಾಮಮಾರ್ಗ ಕೈ ಬಿಟ್ಟು ಸತ್ಯ, ಧರ್ಮದ ಮೇಲೆ ಚುನಾವಣೆ ಆಗಬೇಕು. ರಾಜ್ಯದ ಕಾಂಗ್ರೆಸ್ ಪಕ್ಷದ ವಕ್ತಾರೆಯಾಗಿ ಸುದ್ದಿಗೋಷ್ಠಿ ಮಾಡುತ್ತಿದ್ದೇನೆ. 50 ಜನರಲ್ಲಿ ನನ್ನ ಹೆಸರು ಸಹ ಇದೆ ಎಂದು ಮಾಹಿತಿ ಇದೆ ಎಂದರು.

ನಮ್ಮ ಜಿಲ್ಲೆಯಲ್ಲಿ‌‌ ಮೂರು ಜನರನ್ನು ‌ಟಾರ್ಗೆಟ್ ಮಾಡಿದ್ದಾರೆ. 50 ಜನರಲ್ಲಿ ಕಾಂಗ್ರೆಸ್, ‌ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ. ಜನರ ಭಾವನೆ ಕದಡಲು ಈ ರೀತಿಯ ಪ್ರಯತ್ನಿಸಲಾಗುತ್ತಿದೆ. 1 ಸಾವಿರ ಆದಾಯ ತೆರಿಗೆ ಅಧಿಕಾರಿಗಳು ಬಂದಿರುವ ಮಾಹಿತಿಯಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here