ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ 7ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಾನ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ನ್ನು ಮಂಡಿಸಲಿದ್ದು ಅದಕ್ಕೂ ಮುನ್ನ ವಿಧಾನ ಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಸಿಎಂ ಅವರ ಜೊತೆಗೆ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ ಜಿ ಪರಮೇಶ್ವರ್ ಸೇರಿದಂತೆ ಸಂಪುಟದ ಸದಸ್ಯರು, ಶಾಸಕರು ಭಾಗಿಯಾಗಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಇಂದು ವಿಧಾಸೌಧದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಜನ ಪರ, ಜನಸ್ನೇಹಿ ಬಜೆಟ್ ನೀಡಲು ನಾವು ಬದ್ಧರಿದ್ದೇವೆ. pic.twitter.com/OmAgN3cQRO
— DK Shivakumar (@DKShivakumar) July 7, 2023
ಸದನದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದು, ಗ್ಯಾರಂಟಿಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಲು ಕಿವಿಮಾತು ಹೇಳಿದ್ದಾರೆ. ಶಾಸಕಾಂಗ ಸಭಯಲ್ಲಿ ಎಲ್ಲರೂ ಕಡ್ಡಾಯವಾಗಿ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಈಗಾಗಲೇ ಸಭೆಗೆ ಶಾಸಕರು, ಸಚಿವರು ಆಗಮಿಸಿದ್ದಾರೆ.