ಬೆಂಗಳೂರು: ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷದ ಶಾಸಂಕಾಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ.
ಈ ಕುರಿತು ಪ್ರಕಟನೆ ಹೊರಡಿಸಿರುವ ಪಕ್ಷ, ನಗರದ ಅರಮನೆ ರಸ್ತೆಯ ಸಿ.ಐ.ಡಿ. ಕಚೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕರೆಯಲಾಗಿದ್ದ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಮಾರ್ಚ್ 10ರಂದು ಸಭೆ ಇದೇ ಜಾಗದಲ್ಲಿ ನಿಗದಿಯಾಗಿದೆ ಎಂದು ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾ ನಾಯಕ ಎನ್.ಎಸ್. ಭೋಸರಾಜು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.