Home ಹುಬ್ಬಳ್ಳಿ ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ, ಪಿಎಫ್ಐ ಕಪಿಮುಷ್ಟಿಯಲ್ಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ, ಪಿಎಫ್ಐ ಕಪಿಮುಷ್ಟಿಯಲ್ಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

27
0
Congress party is in SDPI and PFI's grip: Karnataka Chief Minister Basavaraj Bommai
Congress party is in SDPI and PFI's grip: Karnataka Chief Minister Basavaraj Bommai

ಹುಬ್ಬಳ್ಳಿ:

ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ ಹಾಗೂ ಪಿಎಫ್ಐ ಕಪಿಮುಷ್ಟಿಯಲ್ಲಿದ್ದು, ಅದರಿಂದ ಹೊರಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮತ್ತೊcongressಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ . ಅವರ ಒತ್ತಡಕ್ಕೆ ಮಣಿಯುತ್ತಿದ್ದಾರೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದರೂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂಬ ಅಸಮಾಧಾನ ಪಿಎಪಿಐಗಿದೆ. ನಮಗೆ ರಕ್ಷಣೆ ಕೊಡುತ್ತಿಲ್ಲ. ನಾವು ಯಾಕೆ ನಿಮಗೆ ರಕ್ಷಣೆ ಕೊಡಬೇಕು ಅಂತ ಪಿ.ಎಫ್.ಐ ನಾಯಕರು ಪ್ರಶ್ನಿಸುತ್ತಿದ್ದಾರೆ ಎಂದರು.

ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ: ಪಿ.ಎಫ್.ಐ. ನ ಇನ್ನೊಂದು ರೂಪ ಎಸ್.ಡಿ.ಪಿ.ಐ.ಎಸ್.ಡಿ.ಪಿ.ಐ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತು.ಆದರೆ ಅವರು ಕೊಡುವುದಿಲ್ಲ ಎಂದಿದ್ದಾರೆ.ಕಾಂಗ್ರೆಸ್ ನ ಕಾಲದಲ್ಲಿ ಎಸ್.ಡಿ‌.ಪಿ.ಐ., ಪಿ.ಎಫ್.ಐ ಪ್ರಬಲವಾಗಿ ಬೆಳೆದಿದ್ದವು. ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ ಇದೆ.ಎಸ್.ಡಿ.ಪಿ.ಐ‌ ಬಿಜೆಪಿಯ ಬಿ. ಟೀಂ ಅಲ್ಲ. ಬಿ ಟೀಂ ಆಗಿದ್ದರೆ ನಾವು ಪಿ.ಎಫ್.ಐ ಬ್ಯಾನ್ ಮಾಡ್ತಿದ್ದೆವಾ..? ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ‌ ಮಾಡುತ್ತಿದ್ದಾರೆ ಎಂದರು.

ಸೋನಿಯಾಗಾಂಧಿ ಹುಬ್ಬಳ್ಳಿ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಸೋನಿಯಾಗಾಂಧಿ ಬರಲಿ. ನಾವು ಕಾಂಗ್ರೆಸ್ ನಾಯಕರ ರೀತಿ ಅಳೋಲ್ಲ. ಮೋದಿ, ಅಮಿತ್ ಶಾ ಯಾಕೆ ಬಂದರು ಎಂದು ಕಾಂಗ್ರೆಸ್ ನವರು ಕೇಳಿದಂತೆ ನಾವು ಕೇಳುವುದಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here