Home ರಾಜಕೀಯ Congress party treated Jagdish Shettar with dignity and gave him a suitable...

Congress party treated Jagdish Shettar with dignity and gave him a suitable position: Chief Minister Siddaramaiah| ಬಿಜೆಪಿಯಿಂದ ಅವಮಾನಿತರಾಗಿ ಬಂದ ಜಗದೀಶ್ ಶೆಟ್ಟರಿಗೆ ಕಾಂಗ್ರೆಸ್ ಪಕ್ಷ ಘನತೆಯಿಂದ ನಡೆಸಿಕೊಂಡು ಸೂಕ್ತ ಸ್ಥಾನ ಮಾನ ನೀಡಿತು: ಮುಖ್ಯಮಂತ್ರಿ ಸಿದ್ದರಾಮಯ್ಯ

31
0
Congress party treated Jagdish Shettar with dignity and gave him a suitable position: Chief Minister Siddaramaiah

ವಿಧಾನಸಭೆ ಟಿಕೆಟ್ ಕೊಟ್ಟೆವು. ಅಲ್ಲಿ ಸಫಲರಾಗದ್ದಕ್ಕೆ MLC ಮಾಡಿ ಕಾಂಗ್ರೆಸ್ ಅವರಿಗೆ ತುಂಬು ಗೌರವ ಕೊಟ್ಟಿದೆ: ಸಿ.ಎಂ.ಸಿದ್ದರಾಮಯ್ಯ

ಮಡಿಕೇರಿ (ವಿರಾಜಪೇಟೆ):

ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಆಗಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿರಾಜಪೆಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಗದೀಶ್ ಶೆಟ್ಟರ್ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಮಾತನಾಡಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಸೇರಿದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದರು. ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಪುನ: ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು. ನಂತರ ನನಗೆ ಅವರು ಸಿಕ್ಕಿಲ್ಲ ಎಂದರು.

LEAVE A REPLY

Please enter your comment!
Please enter your name here