Home ರಾಜಕೀಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

15
0
DK Shivakumar

ಬಾಗಲಕೋಟೆ : ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ʼಜನರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಭರವಸೆ ಮೂಡಿದೆ. ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ರೂ., ನಿರುದ್ಯೋಗಿ ಯುವಕರಿಗೆ ವಾರ್ಷಿಕ 1 ಲಕ್ಷ ರೂ. ಶಿಷ್ಯ ವೇತನ ಹಾಗೂ ತರಬೇತಿ, 25 ಲಕ್ಷ ರೂ.ವರೆಗಿನ ಆರೋಗ್ಯ ವಿಮೆ, ರೈತರ ಸಾಲಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಬೆಂಬಲ ಬೆಲೆ, ನರೇಗಾ ಯೋಜನೆಯಲ್ಲಿ ಕೇಂದ್ರದ ಕೂಲಿಯ ಪಾಲು 400 ರೂ.ಗಳಿಗೆ ಹೆಚ್ಚಳ, ನಗರದಲ್ಲಿ ಉದ್ಯೋಗ ಖಾತ್ರಿ ಯೋಜನೆಗಳು ಜನರನ್ನು ಆಕರ್ಷಿಸಿವೆ. ಇಂತಹ ಒಂದೇ ಒಂದು ಗ್ಯಾರಂಟಿ ಬಿಜೆಪಿ ನೀಡಿಲ್ಲʼ ಎಂದು ನುಡಿದರು.

ಮೋದಿ ಗ್ಯಾರಂಟಿಯಲ್ಲಿ ಜನರಿಗೆ ಹೊಟ್ಟೆ ತುಂಬಿಸುವ, ಜನರ ಬದುಕಿನಲ್ಲಿ ಬದಲಾವಣೆ ತರುವ ಯೋಜನೆಗಲಿಲ್ಲ. ನಾವು ಜನರ ಬದುಕಿನ ಬಗ್ಗೆ ಆಲೋಚಿಸುತ್ತಿದ್ದೇವೆ ಎಂದು ದೇಶದೆಲ್ಲೆಡೆ ಇಂಡಿಯಾ ಮೈತ್ರಿ ಕೂಟದ ಬಗ್ಗೆ ಒಲವು ಮೂಡುತ್ತಿದೆ. ಹೀಗಾಗಿ ನಮಗೆ ಉತ್ತಮ ಫಲಿತಾಂಶ ಸಿಗಲಿದೆ ಎಂದು ಅವರು ತಿಳಿಸಿದರು.

ಪೆನ್‍ಡ್ರೈವ್ ಪ್ರಕರಣ ತನಿಖೆಗೆ ಸ್ವಾತಂತ್ರ್ಯ: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರವಾಗಿ ಪತ್ರಿಕೆಗಳಲ್ಲಿ ಓದಿದೆ. ನನಗೆ ಹೆಚ್ಚಿನ ಮಾಹಿತಿ ಇಲ್ಲ. ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ನಾವು ಅವರಿಗೆ ತನಿಖೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಉಪ್ಪು ತಿಂದವನು ನೀರು ಕುಡಿಯಬೇಕೆಂದು ಹೇಳುವ ಮೂಲಕ ಕುಮಾರಣ್ಣ ಹಾಗೂ ಬಿಜೆಪಿ ತನಿಖೆಗೆ ಸ್ವಾತಂತ್ರ್ಯ ನೀಡಿದ್ದಾರೆ. ತನಿಖೆ ಅದರ ಪಾಡಿಗೆ ನಡೆಯಲಿದೆ ಎಂದು ಅವರು ಹೇಳಿದರು.

ಸುರಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜುಗೌಡ ಹುಚ್ಚ, ಬಿಜೆಪಿ-ಜೆಡಿಎಸ್‍ನವರು ಆಗಾಗ್ಗೆ ನನ್ನನ್ನು ಸ್ಮರಿಸುತ್ತಿದ್ದಾರೆ ಬಹಳ ಸಂತೋಷ. ಅವರ ವಿಕೆಟ್ ಬೀಳುವಾಗ ತಂಡದ ನಾಯಕನನ್ನು ನೆನೆಸಿಕೊಳ್ಳದೆ ಬೇರೆಯವರನ್ನು ನೆನೆಸಿಕೊಳ್ಳಲು ಸಾಧ್ಯವೇ?. ಬಿಜೆಪಿ ಯಾವುದೇ ನಾಯಕರು ಏನೇ ಮಾಡಿದರೂ ನಾವು ಮೋದಿ ಪ್ರಶ್ನೆ ಮಾಡುವುದಿಲ್ಲವೇ? ಅದೇ ರೀತಿ ನನ್ನನ್ನು ನೆನೆಸಿಕೊಳ್ಳುತ್ತಿದ್ದಾರೆ. ಎಲ್ಲ ವಿಚಾರದಲ್ಲೂ ಬೀದಿಗಿಳಿದು ಮಾತನಾಡುವ ಬಿಜೆಪಿ ನಾಯಕರು ಪ್ರಜ್ವಲ್ ವಿಚಾರದಲ್ಲಿ ಏಕೆ ಮಾತನಾಡುತ್ತಿಲ್ಲ? ಎಂದು ಅವರು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here