Congress party’s senior MLA RV Deshpande, BR Patil and Basavaraj Rayareddy appointed with Cabinet Rank in Karnataka | ರಾಯರೆಡ್ಡಿ, ಬಿ.ಆರ್.ಪಾಟೀಲ್, ದೇಶಪಾಂಡೆಗೆ ‘ಸಂಪುಟ ದರ್ಜೆ ಸ್ಥಾನಮಾನ’
ಬೆಂಗಳೂರು:
ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರನ್ನು ‘ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ ಹಾಗೂ ಬಿ.ಆರ್.ಪಾಟೀಲ್ರನ್ನು ಮುಖ್ಯಮಂತ್ರಿ ಸಲಹೆಗಾರರನ್ನಾಗಿ ನೇಮಕ ಮಾಡಿದ್ದರೆ, ಬಸವರಾಜ್ ರಾಯರೆಡ್ಡಿ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರಿಗೆ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಕಗೊಂಡಿರುವ ಬಸವರಾಜ ರಾಯರೆಡ್ಡಿ ಅವರಿಗೆ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕಗೊಂಡಿರುವ ಬಿ.ಆರ್.ಪಾಟೀಲರಿಗೆ ಅಭಿನಂದನೆಗಳು.
— CM of Karnataka (@CMofKarnataka) December 29, 2023
ತಮ್ಮ ಅಪಾರ ಅನುಭವ ಮತ್ತು ಜ್ಞಾನ ಸದೃಢ ಕರ್ನಾಟಕ ನಿರ್ಮಾಣದ…
ಇದೇ ವೇಳೆ ಈ ಮೇಲ್ಕಂಡ ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಬಿ.ಆರ್. ಪಾಟೀಲ್ ಹಾಗೂ ಬಸವರಾಜ ರಾಯರೆಡ್ಡಿ ಅವರು ಸರಕಾರಕ್ಕೆ ಮುಜುಗರ ಸೃಷ್ಟಿಸುವ ಹೇಳಿಕೆಗಳನ್ನು ನೀಡುವ ಮೂಲಕ ಗಮನ ಸೆಳೆದಿದ್ದರು. ಈ ಮಧ್ಯೆ ಇಬ್ಬರು ಶಾಸಕರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕರೆದು ಸಮಾಧಾನ ಮಾಡಿದ್ದರು. ಇದೀಗ ಅವರಿಗೆ ಸರಕಾರದ ಮಟ್ಟದಲ್ಲಿ ಸ್ಥಾನ ನೀಡಲಾಗಿದೆ.
