Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಳಗಾವಿ
  • ಕಾಂಗ್ರೆಸ್ ಪಕ್ಷದ ಗೆಲುವು ಬಿಜೆಪಿಯ ಭಯಕ್ಕೆ ಕಾರಣ – ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಳಗಾವಿ

ಕಾಂಗ್ರೆಸ್ ಪಕ್ಷದ ಗೆಲುವು ಬಿಜೆಪಿಯ ಭಯಕ್ಕೆ ಕಾರಣ – ಮುಖ್ಯಮಂತ್ರಿ ಸಿದ್ದರಾಮಯ್ಯ

Vighnesh Pawar August 11, 2023 4:30 PM 1 minute read
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬಿಜೆಪಿಯವರಿಗೆ ಜನರ ಬಳಿ ದೂರಲು ಯಾವ ವಿಷಯವೂ ಇಲ್ಲ

ಬೆಳಗಾವಿ:

ಬಿಜೆಪಿಯವರು ಭ್ರಷ್ಟಾಚಾರ , ಬೆಲೆಏರಿಕೆ, ಧರ್ಮ ರಾಜಕಾರಣ ಮಾಡಿದ್ದು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನವನ್ನು ಗಳಿಸಿರುವುದು ಬಿಜೆಪಿಯವರ ಭಯಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಅಥಣಿ ಹೆಲಿಪ್ಯಾಡ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸಂತೋಷವಾಗಿದ್ದಾರೆ. ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಬೆಳಗಾವಿಯಲ್ಲಿ ಚಾಲನೆ ದೊರೆಯಲಿದ್ದು, 1.28 ಕೋಟಿ ಕುಟುಂಬಗಳಿಗೆ ಮಾಹೆಯಾನ 2000 ರೂ. ನೆರವು ನೀಡುವ ದೇಶದಲ್ಲಿಯೇ ದೊಡ್ಡ ಯೋಜನೆಯಾಗಿದೆ. ನೇಕಾರರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡುವ ಬಗ್ಗೆ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನವನ್ನು ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಕಳೆದ ಮೂರು ವರ್ಷಗಳಿಂದ ಗುತ್ತಿಗೆದಾರರ ಬಿಲ್ಲುಗಳು ಪಾವತಿಯಾಗಿಲ್ಲ. ನಮ್ಮ ಸರ್ಕಾರ ಯಾರ ಗುತ್ತಿಗೆದಾರರ ಬಿಲ್ ಪಾವತಿಗೂ ತೊಂದರೆ ಮಾಡುವುದಿಲ್ಲ. ಮೂರು ವರ್ಷದಿಂದ ಬಿಲ್ ಪಾವತಿ ಮಾಡದೇ ಇದ್ದ ಬಿಜೆಪಿಯವರು ಹೋರಾಟ ಮಾಡಲು ಯಾವ ನೈತಿಕತೆಯೂ ಇಲ್ಲ. ಬಿಜೆಪಿಯವರಿಗೆ ಜನರ ಬಳಿ ದೂರಲು ಯಾವ ವಿಷಯವೂ ಇಲ್ಲ. ಆದ್ದರಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.

ರಾಹುಲ್ ಗಾಂಧಿ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಮತ್ತಿತರು ಸೇರಿ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯ ಲೋಕಸಭಾಧ್ಯಕ್ಷರ ಮುಂದಿದೆ. ರಾಹುಲ್ ಗಾಂಧಿಯವರು ಅಧಿವೇಶನದಲ್ಲಿ ಅವಿಶ್ವಾಸ ಮಂಡನೆ ಸಂದರ್ಭದಲ್ಲಿ ಕೇಂದ್ರಸರ್ಕಾರದ ವಿರುದ್ಧ ಕಟು ಟೀಕೆ ಮಾಡಿರುವುದರಿಂದ ದೂರು ನೀಡಿದ್ದಾರೆ ಎಂದರು.

ಸಚಿವ ಚೆಲುವರಾಯಸ್ವಾಮಿಯವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಈ ಆರೋಪ ಎಲ್ಲಿ ಕೇಳಿಬಂದಿದೆ ಎಂದು ಪ್ರಶ್ನಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೇಳಿಕೆಯನ್ನು ಗಮನಿಸಬೇಕು ಎಂದರು.

ಸಂತೋಷ್ ಪಾಟೀಲ್ ಪ್ರಕರಣ: ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ

ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬದವರು ಪೋಲಿಸರಿಂದ ನಮಗೆ ನ್ಯಾಯ ದೊರೆತಿಲ್ಲ, ಸಿಐಡಿ ಗೆ ವಹಿಸಬೇಕೆಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರ ಮಾಡಿ, ಕಾನೂನು ಇಲಾಖೆಯೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದರು.

ಅಶೋಕ್ ಹತಾಶರಾಗಿದ್ದಾರೆ

ಮಾಜಿ ಸಚಿವ ಆರ್.ಅಶೋಕ್ ಅವರು ತಮ್ಮ ಸರ್ಕಾರ ಬಿನ್ ಲ್ಯಾಡೆನ್ ಸರ್ಕಾರ ಎಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಹಾಗಾಗಿ ಹತಾಶರಾಗಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿದ್ದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.

ಅಂಗವಿಕಲ ವ್ಯಕ್ತಿಯ ಮೇಲೆ ಹಲ್ಲೆ : ಪೋಲೀಸ್ ಅಮಾನತು

ಪೋಲೀಸರು ಅಂಗವಿಕಲ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಮಾತನಾಡಿ, ಪೋಲೀಸರು ಮಾಡಿದ್ದು ತಪ್ಪು. ಹಲ್ಲೆ ನಡೆಸಿದ ಅಧಿಕಾರಿಯನ್ನು ಅಮಾನತುಗೊಳಿಸಿ, ಇಲಾಖಾ ತನಿಖೆ ಕೈಗೊಳ್ಳಲಾಗಿದೆ. ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

ವರದಿ ಬಂದ ಕೂಡಲೇ ಗುತ್ತಿಗೆದಾರರ ಬಿಲ್ ಪಾವತಿ

ಗುತ್ತಿಗೆದಾರರ ಬಿಲ್ ಪಾವತಿಗೆ ಸಂಬಂಧಿಸಿದಂತೆ ಮಾತನಾಡಿ, ಹಿಂದಿನ ಸರ್ಕಾರದಲ್ಲಿ ಆಗಿರುವ ಕಾಮಗಾರಿಗಳಿಗೆ 2-3 ವರ್ಷಗಳಾದರೂ ಬಿಲ್ ಬಾಕಿ ಉಳಿಸಿ ಹೋಗಿದ್ದಾರೆ. ನಾವು ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದೆ. ಆದರೆ, ನಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾವು ಹಿಂದಿನ ಸರ್ಕಾರದ ಮೇಲೆ 40 % ಕಮಿಷನ್ ಆರೋಪ ಮಾಡಿದ್ದೆವು. ಅದು ಪ್ರಮುಖವಾಗಿ ಚರ್ಚೆಯಾಗಿದೆ. ನಾವು ತನಿಖೆಯಿಂದ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕೆಲಸ ಮಾಡದೇ ಹೋದರೇ, ಕೆಲಸ ಆಗಿದೆಯೋ ಇಲ್ಲವೋ ಎಂದು ತಿಳಿಯಬೇಕು. ಒಳ್ಳೆ ಕೆಲಸ ಮಾಡಿದವರಿಗೆ ತೊಂದರೆ ಕೊಡುವುದಿಲ್ಲ. ಬಿಲ್ ಕೂಡ ಪಾವತಿಸಲಾಗುವುದು. ನಾಲ್ಕು ತಂಡಗಳನ್ನು ರಚಿಸಿ ತನಿಖೆಯಾಗುತ್ತಿದೆ. ವರದಿ ಬಂದ ಕೂಡಲೇ ಪರಿಶೀಲಿಸಿ ತಪ್ಪು ಮಾಡದಿದ್ದರೆ ಬಿಲ್ ಪಾವತಿಸುತ್ತೇವೆ. ತಪ್ಪಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

About the Author

Vighnesh Pawar

Subscriber

View All Posts

Post navigation

Previous: BBMP contractors bill payment: ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ: ಡಿಕೆ ಶಿವಕುಮಾರ್
Next: ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರೇರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ಬೆಂಗಳೂರಿನ ಜಾರಿ ನಿರ್ದೇಶನಾಲಯ ಕಚೇರಿಯ ಪ್ರವೇಶದ್ವಾರ — ಸಂಗ್ರಹ ಚಿತ್ರ
  • ಅಪರಾಧ
  • ಕರ್ನಾಟಕ
  • ಬೆಳಗಾವಿ

ಬೆಳಗಾವಿ ಹೂಡಿಕೆ ವಂಚನೆ ಪ್ರಕರಣ: ₹427.16 ಕೋಟಿ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಇಡಿ

The Bengaluru Live October 31, 2026 1:11 PM
ಕರ್ನಾಟಕದ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ ಭಾವಚಿತ್ರ.
  • ಬೆಂಗಳೂರು ನಗರ
  • ಕರ್ನಾಟಕ
  • ಬೆಳಗಾವಿ
  • ರಾಜಕೀಯ

ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ; ಸಿಎಂ ಸಂತಾಪ

The Bengaluru Live October 30, 2026 10:30 AM
ಅಕ್ಟೋಬರ್ 27ರಂದು ಬೆಳಗಾವಿಯ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಬಾಸ್ಕೆಟ್‌ಬಾಲ್ ಆಡುತ್ತಿರುವ ಕೆಡೆಟ್‌ಗಳು.
  • ಕರ್ನಾಟಕ
  • ಕ್ರೀಡೆ
  • ಬೆಳಗಾವಿ

ಬೆಳಗಾವಿಯಲ್ಲಿ ಐದು ಮಿಲಿಟರಿ ಶಾಲೆಗಳ 175 ಕೆಡೆಟ್‌ಗಳ ಕ್ರೀಡಾ–ಶೈಕ್ಷಣಿಕ ಸ್ಪರ್ಧೆ

The Bengaluru Live October 27, 2026 7:30 PM

Latest Post

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

November 22, 2026 7:42 AM
ನವೆಂಬರ್ 22ರಂದು ವಿಜಯನಗರ, ಬ್ಯಾಡರಹಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು

ನವೆಂಬರ್ 22ರಂದು ವಿಜಯನಗರ, ಬ್ಯಾಡರಹಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ

November 22, 2026 4:58 AM
ಲೇಖಕ ರವಿ ಹಂಜ್ ನೆರೆ ರಾಜ್ಯದಲ್ಲಿ ಪತ್ತೆ: ವಿಚಾರಣೆಗೆ ಹಾಜರಾಗಲು ನೋಟಿಸ್, ಅಮೆರಿಕ ದೂತಾವಾಸಕ್ಕೂ ಮಾಹಿತಿ ಎಂದ ಪ್ರಿಯಾಂಕ್ ಖರ್ಗೆ ಹಸಿರು ಕಡತ ಹಿಡಿದ ವ್ಯಕ್ತಿಯ ಬಳಿ ರಸ್ತೆಯ ಮೇಲೆ ಸುಡುತ್ತಿರುವ ಕಾಗದಗಳ ರಾಶಿ ಮತ್ತು ಸುತ್ತ ನಿಂತಿರುವ ಜನರು
  • ಕರ್ನಾಟಕ

ಲೇಖಕ ರವಿ ಹಂಜ್ ನೆರೆ ರಾಜ್ಯದಲ್ಲಿ ಪತ್ತೆ: ವಿಚಾರಣೆಗೆ ಹಾಜರಾಗಲು ನೋಟಿಸ್, ಅಮೆರಿಕ ದೂತಾವಾಸಕ್ಕೂ ಮಾಹಿತಿ ಎಂದ ಪ್ರಿಯಾಂಕ್ ಖರ್ಗೆ

November 21, 2026 9:44 PM
ಹಿರಿಯೂರಿನಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಸಿಎಂ ಶಿವಕುಮಾರ್: ನ್ಯಾಯಯುತ ಬೇಡಿಕೆ ಈಡೇರಿಸುವ ಭರವಸೆ ಸರ್ಕಾರಿ ನೌಕರರ ಸಮ್ಮೇಳನದ ಬ್ಯಾನರ್ ಮುಂದೆ ವೇದಿಕೆಯ ಮೇಲೆ ಹಳದಿ ಮತ್ತು ಕೆಂಪು ಶಾಲು ಹೊದ್ದ ವ್ಯಕ್ತಿಗಳು ಸ್ಮರಣಿಕೆ ಹಿಡಿದು ನಿಂತಿದ್ದಾರೆ
  • ಕರ್ನಾಟಕ
  • ಚಿತ್ರದುರ್ಗ

ಹಿರಿಯೂರಿನಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಸಿಎಂ ಶಿವಕುಮಾರ್: ನ್ಯಾಯಯುತ ಬೇಡಿಕೆ ಈಡೇರಿಸುವ ಭರವಸೆ

November 21, 2026 9:39 PM

ನೀವು ತಪ್ಪಿಸಿಕೊಂಡಿರಬಹುದು

ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

The Bengaluru Live November 22, 2026 8:06 AM
ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

The Bengaluru Live November 22, 2026 7:42 AM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು

ನವೆಂಬರ್ 22ರಂದು ವಿಜಯನಗರ, ಬ್ಯಾಡರಹಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ

The Bengaluru Live November 22, 2026 4:58 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್
  • ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ
  • ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ
  • ನವೆಂಬರ್ 22ರಂದು ವಿಜಯನಗರ, ಬ್ಯಾಡರಹಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ
©Copyright 2025 The Bengaluru Live All rights reserved. | MoreNews by AF themes.