ಬೆಂಗಳೂರು:
ಬೆಂಗಳೂರು ನಗರದಲ್ಲಿ ಬಿಬಿಎಂಪಿ ಕಸ ಸಂಗ್ರಹಕ್ಕೆ ಶುಲ್ಕ ಹೆಚ್ಚಳ ಮಾಡಿರುವ ಬಿಬಿಎಂಪಿ ವಿರುದ್ಧ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದರು.
ಬಿಬಿಎಂಪಿ ಕಸ ಸಂಗ್ರಹಣೆಗೆ ವಿಧಿಸುವ ಹೆಚ್ಚುವರಿ ಶುಲ್ಕ ಹಾಗೂ ಆಸ್ತಿ ತೆರಿಗೆ ಹೆಚ್ಚಳ ಹಿಂಪಡೆಯುವಂತೆ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆ.
— G. Shekar / ಜಿ. ಶೇಖರ್ (@GShekarINC) December 16, 2020
ಪ್ರತಿಭಟನೆಯಲ್ಲಿ@RLR_BTM, @dineshgrao, @Sowmyareddyr, @ArshadRizwan @mlanaharis @SaleemAhmadINC @HariprasadBK2, @GKRISHNAPPA6 @MlcNarayanswamy ಇತರರು ಭಾಗವಹಿಸಿದ್ದರು. pic.twitter.com/S10HuVMaRE
ಪ್ರತಿಭಟನೆಯನ್ನುದ್ದೇಶಿಸಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ನಗರದಲ್ಲಿ ಬಿಬಿಎಂಪಿ ಕಸ ಸಂಗ್ರಹಕ್ಕೆ ಶುಲ್ಕವನ್ನು ಹೆಚ್ಚಿಸಿದೆ. ಇದೊಂದು ಅವೈಜ್ಞಾನಿಕ ಕ್ರಮ. ರಾಜ್ಯ ಸರ್ಕಾರದ ದಿವಾಳಿ ಅಗಿದೆ. ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಆಯೋಮಯವಾಗಿದೆ. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ನೇರ ಹೊಣೆಗಾರರಾಗಿದ್ದು, ರಾಜ್ಯ ಸರ್ಕಾರ ತನ್ನ ಪಾಲಿನ ಜಿಎಸ್ ಟಿ ಹಣ ಕೇಂದ್ರದಿಂದ ಪಡೆದುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. UNI