ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಅವಾಚ್ಯ ಪದ ಬಳಸಿದ ಹಿನ್ನೆಲೆ ಕಾಂಗ್ರೆಸ್ ಯುವ ಮೋರ್ಚಾ ಸದಸ್ಯರು ರಮೇಶ್ ಜಾರಕಿಹೊಳಿ ಸದಾಶಿವನಗರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಎರಡು ತಂಡಗಳಾಗಿ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ವಿರುದ್ಧ ಧಿಕ್ಕಾರ ಕೂಗಿದರು. ರಮೇಶ್ ಜಾರಕಿಹೊಳಿ ಕ್ಷಮಾಪಣೆ ಕೇಳಬೇಕು.ಈಗಾಗಲೇ ವಿಷಾದ ವ್ಯಕ್ತಪಡಿಸುವುದಲ್ಲ..ಡಿ.ಕೆ.ಶಿವಕುಮಾರ್ ಎದುರೇ ಕ್ಷಮೆ ಕೋರಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು.ಒಂದು ತಂಡ ಜಾರಕಿಹೊಳಿ ನಿವಾಸದ ಮುಂದೆ,ಮತ್ತೊಂದು ತಂಡ ಡಿ.ಕೆ.ಶಿವಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.
ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀ ಸರು ವಶಕ್ಕೆ ಪಡೆದರು. ಈ ವೇಳೆ ಕಾರ್ಯಕರ್ತರು ಮತ್ತು ಪೋಲೀಸರ ನಡುವೆ ತಳ್ಳಾಟ ನೂಕಾಟ ಉಂಟಾಯಿತು.
ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಅಸಾಂವಿಧಾನಿಕ ಪದಬಳಕೆ ಮಾಡಿದ್ದನ್ನು ಖಂಡಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.@nalapad pic.twitter.com/SRIN7uAKvi
— Karnataka Congress (@INCKarnataka) March 27, 2021