Home ಬೆಂಗಳೂರು ನಗರ ವಿ.ಸೋಮಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ವಿ.ಸೋಮಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

59
0

ಬೆಂಗಳೂರು:

ವಸತಿ ಸಚಿವ ವಿ.ಸೋಮಣ್ಣ ಅವರ ಅಭಿವೃದ್ಧಿ ಕೆಲಸಗಳನ್ನು ಹಾಗೂ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿ ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರಾದ ಹೇಮಲತಾ ಅವರು ಸೇರಿದಂತೆ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ರಂಗಮಂದಿರ ಅವರಣದಲ್ಲಿ ಸಚಿವರಾದ ವಿ.ಸೋಮಣ್ಣರವರು ಮಾತನಾಡಿ ದೇಶ ಅಭಿವೃದ್ದಿಯತ್ತ ಹೊಸ ಸಂದೇಶದೊಂದಿಗೆ ಭಾರತ ಭವಿಷ್ಯದತ್ತ ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ ಯಶ್ವಸಿಯಾಗಿ ಸಾಗುತ್ತಿದೆ ಎಂದರು.

ರಾಜ್ಯ ಬಿ.ಜೆ.ಪಿ.ಯುವ ನಾಯಕ ಡಾ. ಅರುಣ್ ಸೋಮಣ್ಣ, ಗೋವಿಂದರಾಜನಗರ ಮಂಡಲ ಬಿ.ದೆ.ಪಿ.ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಮೋಹನ್ ಕುಮಾರ್, ದಾಸೇಗೌಡ ಮತ್ತು ಬಿ.ಜೆ.ಪಿ.ಮುಖಂಡರುಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here