ಮೈಸೂರು:
ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ, ಆರೋಪಿಗಳ ಪೈಕಿ ಓರ್ವ ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಸಂಸತ್ ಭವನದ ಪಾಸ್ ಪಡೆದಿದ್ದರು ಎನ್ನಲಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆ, ಮೈಸೂರು ಗ್ರಾಮಾಂತರ ವಿಭಾಗದ ಕಾಂಗ್ರೆಸ್ ಕಾರ್ಯಕರ್ತರು ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿರುವ ಸಂಸದ ಪ್ರತಾಪ್ ಸಿಂಹರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯಕ್ಕೆ ಸಂಸದರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.
ಪ್ರತಾಪ್ ಸಿಂಹ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರನ್ನು ನಿಯಂತ್ರಿಸಲು ಭಾರೀ ಸಂಖ್ಯೆಯ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.