Home ಬೆಂಗಳೂರು ನಗರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ನೂತನ ಸೂತ್ರ ಸಿದ್ದ: ಜಗದೀಶ್‌...

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ನೂತನ ಸೂತ್ರ ಸಿದ್ದ: ಜಗದೀಶ್‌ ಶೆಟ್ಟರ್‌

59
0
Advertisement
bengaluru

ಸಂಕಷ್ಟದ ಸಮಯದಿಂದ ಹೊರಬರಲು ಸರಕಾರಕ್ಕೆ ಅಗತ್ಯ ಸಹಕಾರ ಹಾಗೂ ಸಲಹೆ ನೀಡಲು ಕೈಗಾರಿಕೋದ್ಯಮಿಗಳಿಗೆ ಕರೆ

ಬೆಂಗಳೂರು:

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ಈಗಾಗಲೇ ನೂತನ ಸೂತ್ರವನ್ನು ರಚಿಸಿದ್ದು ಕೆಲವೇ ದಿನಗಳಲ್ಲಿ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಬೆಂಗಳೂರು ಚೇಂಬರ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ ವತಿಯಿಂದ ಆಯೋಜಿಸಿದ್ದ ವೆಬಿನಾರ್‌ ನಲ್ಲಿ ಭಾಗವಹಿಸಿ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದರು. ಕರೋನಾ ಸಂಕಷ್ಟ ಎಲ್ಲರನ್ನೂ ತಟ್ಟಿದೆ. ಕೈಗಾರಿಕೋದ್ಯಮಿಗಳಿಗೂ ಹಾಗೂ ಕೈಗಾರಿಕೆಗಳಿಗೂ ಇದು ಹೊರತಾಗಿಲ್ಲ. ಕೈಗಾರಿಕಾ ಕ್ಷೇತ್ರವನ್ನು ಅಭಿವೃದ್ದಿಗೊಳಿಸಲು ರಾಜ್ಯ ಮತ್ತು ಕೇಂದ್ರ ಸರಕಾರ ಬಹಳಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಕೈಗಾರಿಕೋದ್ಯಮಿಗಳು ಸಚಿವರ ಮುಂದೆ ಇಟ್ಟಂತಹ ಸಮಸ್ಯೆಗಳ ಬಗ್ಗೆ ಮಾತನಾಡಿ, ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕ ಹೆಚ್ಚಳದ ಬಗ್ಗೆ ಸಂಬಂಧಪಟ್ಟ ಸಚಿವರು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ವಿಸ್ತ್ರುತ ಸಭೆಯನ್ನ ನಡೆಸಿದ್ದೇವೆ. ಹೆಚ್ಚಾಗಿರುವ ಶುಲ್ಕವನ್ನು ಮರುಪರಿಶೀಲನೆ ನಡೆಸಲು ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು, ಈ ತಂಡ ಈಗಾಗಲೇ ಒಂದು ಸೂತ್ರವನ್ನು ರಚಿಸಿದ್ದು ಇನ್ನು ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಸಭೆಯನ್ನು ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

bengaluru bengaluru

ಕೈಗಾರಿಕೋದ್ಯಮಿಗಳು ಸಂಕಷ್ಟದ ಸಮಯದಲ್ಲಿ ಸರಕಾರಕ್ಕೆ ಅಗತ್ಯ ಸಲಹೆ ಹಾಗೂ ಸಹಕಾರ ನೀಡಬೇಕು. ಆಕ್ಸಿಜನ್‌ ಉತ್ಪಾದನೆ, ಅಗತ್ಯ ವಸ್ತುಗಳ ಸರಬರಾಜು ಹೀಗೆ ಹತ್ತು ಹಲವು ಕಾರ್ಯಗಳಲ್ಲಿ ಅವರು ತೊಡಗಿಸಿಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ವ್ಯಾಕ್ಸಿನ್‌ ಸರಬರಾಜು ಹೆಚ್ಚಾದ ಸಂಧರ್ಭದಲ್ಲಿ ಕೈಗಾರಿಕಾ ಸಮುಚ್ಚಯಗಳಲ್ಲೂ ವ್ಯಾಕ್ಸಿನ್‌ ನೀಡುವ ಪ್ರಕ್ರಿಯೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು. ಕೈಗಾರಿಕೋದ್ಯಮಿಗಳು ಸಚಿವರ ಗಮನಕ್ಕೆ ತಂದಂತಹ ಹಲವಾರು ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ವೆಬಿನಾರ್‌ ನಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್‌ಕುಮಾರ್‌ ಖತ್ರಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರಿಮತಿ ಗುಂಜನ್‌ ಕೃಷ್ಣ, ಉದ್ಯೋಗ ಮಿತ್ರ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಬಿಸಿಐಸಿ ಅಧ್ಯಕ್ಷ ಟಿ ಆರ್‌ ಪರುಶುರಾಮನ್‌ ಭಾಗವಹಿಸಿದ್ದರು.


bengaluru

LEAVE A REPLY

Please enter your comment!
Please enter your name here