ಸಂವಿಧಾನ ದಿನದ ಅಂಗವಾಗಿ ನವೆಂಬರ್ 26ರಂದು ಬೆಂಗಳೂರಿನ ವಿಧಾನಸೌಧದ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಚಿತ್ರ: ಡಿಐಪಿಆರ್
ಬೆಂಗಳೂರು: ಸಂವಿಧಾನ ದಿನಾಚರಣೆಯ ಅಂಗವಾಗಿ ನವೆಂಬರ್ 26ರಂದು ವಿಧಾನಸೌಧದ ಮುಂಭಾಗದಲ್ಲಿರುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಹಕ್ಕುಗಳನ್ನು ಕಲ್ಪಿಸಿ, ಪ್ರಜಾಪ್ರಭುತ್ವದ ಬಲಿಷ್ಠ ಅಡಿಪಾಯವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಇಂದಿಗೂ ದೇಶದ ಅಭಿವೃದ್ಧಿಗೆ ದಾರಿದೀಪವಾಗಿವೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಬಲಿಷ್ಠ ಹಾಗೂ ಸಮೃದ್ಧ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಬದ್ಧರಾಗೋಣ ಎಂದು ಡಿಸಿಎಂ ಜಿ. ಪರಮೇಶ್ವರ ಅವರು ತಿಳಿಸಿದರು. ಈ ವೇಳೆ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಶಿವಕುಮಾರ್ ಅವರು ಗೌರವ ನಮನ ಸಲ್ಲಿಸುವ ವೇಳೆ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ, ಶಾಸಕರಾದ ಅಶೋಕ್ ಪಟ್ಟಣ, ಬೇಳೂರು ಗೋಪಾಲಕೃಷ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ:
