ನವೆಂಬರ್ 28ರಂದು ಬಸವಕಲ್ಯಾಣದ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.
ಬೆಂಗಳೂರು: ಕಲ್ಯಾಣ ಕ್ರಾಂತಿಯ ಐತಿಹಾಸಿಕ, ಪವಿತ್ರ ಭೂಮಿ ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ‘ಸಂವಿಧಾನ ಗೌರವ ದಿನಾಚರಣೆ’ಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನವೆಂಬರ್ 28ರಂದು ಪಾಲ್ಗೊಂಡರು.
12ನೇ ಶತಮಾನದಲ್ಲಿಯೇ ‘ಅನುಭವ ಮಂಟಪ’ದ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜಾರಿಗೆ ತಂದ ಮಹಾನ್ ಮಾನವತಾವಾದಿ ಬಸವೇಶ್ವರರ ಕಾಯಕಭೂಮಿ ಇದು ಎಂದು ಅವರು X ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಸಂವಿಧಾನಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನ ಮತ್ತು ಅದರ ಮೌಲ್ಯಗಳನ್ನು ಸ್ಮರಿಸುತ್ತಾ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ದೃಢ ಸಂಕಲ್ಪಕ್ಕೆ ಸಮಾರಂಭ ಸಾಕ್ಷಿಯಾಯಿತು ಎಂದಿದ್ದಾರೆ.
ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ್, ಶರಣು ಸಲಗಾರ, ಎಂ.ಜಿ. ಮೂಳೆ, ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಶಾಸಕ ಗುಂಡಪ್ಪ ವಕೀಲ್ ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
