Home ಆರೋಗ್ಯ Corona confirmed in 61 people in Karnataka| ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ...

Corona confirmed in 61 people in Karnataka| ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ದೃಢ

30
0
Covid

ಬೆಂಗಳೂರು:

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.95 ರಷ್ಟಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಕಳೆದ 24 ಗಂಟೆಯಲ್ಲಿ 3,123 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 863 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 156 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಮೈಸೂರು 8, ಬೆಳಗಾವಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 5, ಬಳ್ಳಾರಿ 2, ಚಾಮರಾಜನಗರ 2, ಶಿವಮೊಗ್ಗ 2, ವಿಜಯನಗರ 2, ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿವೆ.

LEAVE A REPLY

Please enter your comment!
Please enter your name here