Home ಆರೋಗ್ಯ ಕೊರೊನಾ ನಿಯಂತ್ರಣಕ್ಕೆ ಜನರ ಸಹಕಾರ ಬೇಕು: ಸಚಿವ ಸುಧಾಕರ್

ಕೊರೊನಾ ನಿಯಂತ್ರಣಕ್ಕೆ ಜನರ ಸಹಕಾರ ಬೇಕು: ಸಚಿವ ಸುಧಾಕರ್

37
0
Sudhakar

ಬೆಂಗಳೂರು:

ಕೊರೊನಾ ಪ್ರಕರಣ ಬೆಂಗಳೂರಿನಲ್ಲಿ ಒಂದು ಸಾವಿರ ದಾಟಿದೆ. ಜನಸಾಮಾನ್ಯರು ಕೋವಿಡ್ ಸುರಕ್ಷತಾ ಕ್ರಮ ಪಾಲಿಸದಿದ್ದರೆ, ಆಪಾಯವಾಗುತ್ತದೆ. ಮನೆಯಲ್ಲಿರುವ ಹಿರಿಯ ನಾಗರಿಕರಿಗೆ ಲಸಿಕೆ ಕೊಡಿಸಬೇಕು. ಯುವಜನರು ಅನಗತ್ಯವಾಗಿ ಹೊರಗೆ ಸುತ್ತಾಡಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿಗೆ ಸರ್ಕಾರ ಹಾಗೂ ಸಾರ್ವಜನಿಕರು ಸ್ಪಂದಿಸಬೇಕು. ಯಾವುದೇ ಚಟುವಟಿಕೆಗೆ ಕೊರೊನಾ ರಿಯಾಯಿತಿ ತೋರುವುದಿಲ್ಲ. ಸರ್ಕಾರ ತನ್ನ ಇತಿಮಿತಿಯಲ್ಲಿ ನಿಯಂತ್ರಣ ಮಾಡುತ್ತಿದೆ. ಜನರಿಗೆ ಕಷ್ಟವಾಗಬಾರದೆಂದು ಹೆಚ್ಚಿನ ನಿರ್ಬಂಧ ಹೇರಿಲ್ಲ. ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸರ್ವಪಕ್ಷ ಸಭೆ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಕೋರಲಾಗುವುದು. ಚುನಾವಣೆ ಸಮಯದಲ್ಲಿ ಇದು ಅಗತ್ಯ ಎಂದರು.

ಗಡಿಭಾಗಗಳಲ್ಲಿ ಜನರ ಮೇಲೆ ನಿಗಾ ಇರಿಸಲಾಗಿದೆ. ಎಲ್ಲ ಜಿಲ್ಲೆಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದರು.

LEAVE A REPLY

Please enter your comment!
Please enter your name here