ಬೆಂಗಳೂರು:
ಕರ್ನಾಟಕದಲ್ಲಿ ಇಂದು 2 ಸಾವಾಗಿದೆ, 173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿದೆ.
173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳ ಪೈಕಿ 649 ಜನರು ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಮತ್ತು ಉಳಿದ 53 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂತೆಯೇ ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೇರಿದೆ. ಮೃತರು ಕ್ರಮವಾಗಿ 59 ಮತ್ತು 69 ವರ್ಷ ವಯಸ್ಸಿನವರಾಗಿದ್ದಾರೆ, ಇಬ್ಬರೂ ಬೆಂಗಳೂರು ನಗರ ಜಿಲ್ಲೆಯಲ್ಲಿ ದಾಖಲಾಗಿದ್ದಾರೆ.
#COVID19 Media Bulletin – 29/12/2023 pic.twitter.com/I0XeADPO4r
— K'taka Health Dept (@DHFWKA) December 29, 2023
ಇಬ್ಬರಿಗೂ ಜ್ವರ ಮತ್ತು ಕೆಮ್ಮಿನ ಲಕ್ಷಣಗಳಿತ್ತು ಎಂದು ಹೇಳಲಾಗಿದೆ. ಕಳೆದ 24 ಗಂಟೆಗಳಲ್ಲಿ 37 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು 8,349 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 6,400 RTPCR ಮತ್ತು 1,949 ರಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲಾಗಿದೆ.