ರಾಜ್ಯದಲ್ಲಿ 10 ಸಾವಿರ ಗಡಿದಾಟಿದ ಹೊಸ ಪ್ರಕರಣ
ಬೆಂಗಳೂರು:
ರಾಜ್ಯದಲ್ಲಿ ಒಂದೇ ದಿನದಲ್ಲಿ ಕೊರೊನಾ ಸೋಂಕು ಹೊಸ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿದಾಟಿದೆ. ಬೆಂಗಳೂರು ನಗರ ಒಂದರಲ್ಲೇ ಏಳೂವರೆ ಸಾವಿರ ಪ್ರಕರಣಗಳು ಪತ್ತೆಯಾಗಿದೆ.
ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಸೋಂಕಿನಿಂದ 40 ಮಂದಿ ಮೃತಪಟ್ಟಿದ್ದಾರೆ.
ಇಂದಿನ 11/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/T3FB9bjVe5 @mla_sudhakar @PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity pic.twitter.com/XAfJYzblGK
— K'taka Health Dept (@DHFWKA) April 11, 2021
ಬೆಂಗಳೂರು ನಗರ ಒಂದರಲ್ಲೇ ಇಂದು 7,584 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 4,81,982ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 27 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 2,638 ಸೋಂಕಿತರು ಸಂಪೂರ್ಣ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,83,157ಕ್ಕೆ ಏರಿಕೆಯಾಗಿದೆ. ಆದರೆ, ರಾಜ್ಯದಲ್ಲಿ ದಿನೇದಿನೆ ಸಕ್ರಿಯ ಪ್ರಕರಣಗಳು ಹೆಚ್ಚುತ್ತಿವೆ.
ಪ್ರಸ್ತುತ 69,225 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 440 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಸೋಂಕಿತರ ಪ್ರಮಾಣ (ಪರೀಕ್ಷೆಗೆ ಒಳಪಟ್ಟವರಲ್ಲಿ) ಶೇ.7.72ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ. 0.39ರಷ್ಟಿದೆ.