Home ಆರೋಗ್ಯ Covid-19: ನಿಯಮ ಪಾಲನೆಗೆ ಬಿಬಿಎಂಪಿಯಿಂದ 2,000 ಹೋಮ್ ಗಾರ್ಡ್ಸ್ ನಿಯೋಜನೆ

Covid-19: ನಿಯಮ ಪಾಲನೆಗೆ ಬಿಬಿಎಂಪಿಯಿಂದ 2,000 ಹೋಮ್ ಗಾರ್ಡ್ಸ್ ನಿಯೋಜನೆ

51
0

ಬೆಂಗಳೂರು:

ನಗರದಲ್ಲಿ ಕೋವಿಡ್ ಸೋಂಕು ಕ್ರಮೇಣ ಉಲ್ಭಣಗೊಳ್ಳುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ. ಎಲ್ಲಾ ನಾಗರಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡದೇ ಇರುವವರಿಗೆ ಮಾರ್ಷಲ್ ಹಾಗೂ ಪೊಲೀಸ್ ಸಿಬ್ಬಂದಿ ದಂಡ ವಿಧಿಸುತ್ತಿದ್ದಾರೆ. ಇದರ ಜೊತೆಗೆ 2,000 ಹೋಮ್ ಗಾರ್ಡ್ಸ್ ಗಳನ್ನು ನಿಯೋಜನೆ ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರು ಗೌರವ್ ಗುಪ್ತಾ ರವರು ತಿಳಿಸಿದರು.

ನಗರದಲ್ಲಿ ಲಸಿಕೆ ನೀಡುವ ಸಂಬಂಧ ಈಗಾಗಲೇ ಖಾಸಗಿ ಆಸ್ಪತ್ರೆ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಇಂಡಸ್ಟ್ರೀಸ್ ಜೊತೆ ಚರ್ಚೆ ಮಾಡಲಾಗಿದ್ದು, ಅವರ ಸ್ಥಳದಲ್ಲಿಯೇ ಲಸಿಕೆ ನೀಡುವ ಕ್ರಮಕ್ಕೆ ಮುಂದಾಗಲಾಗುತ್ತಿದೆ. ಜೊತೆಗೆ ಲಸಿಕಾ ಕ್ರಂದ್ರಗಳನ್ನು ಹೆಚ್ಚಳ ಮಾಡಲು ಸೂಕ್ತಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಏ. 20 ರಷ್ಟು ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಾಸಿಗೆ ಮೀಸಲಾತಿಯನ್ನು ಹೆಚ್ಚಳ ಮಾಡಿಕೊಂಡು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಕೋವಿಡ್ ಸೋಂಕು ಬಂದವರು ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯುವ ವ್ಯವಸ್ಥೆಯಿಲ್ಲದವರು ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬಹದು. ಈ ಪೈಕಿ ಈಗಾಗಲೇ ಹೆಚ್.ಎ.ಎಲ್ ಹಾಗೂ ಹಜ್ ಭವನ್ ನಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಇದಲ್ಲದೆ ಪ್ರತೀ ವಲಯಗಳಲ್ಲಿಯೂ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.

ಈ ವೇಳೆ ಶಾಸಕರು ಉದಯ್ ಬಿ ಗರುಡಾಚಾರ್, ವಿಧಾನ ಪರಿಷತ್ ಸದಸ್ಯರು ಪಿ.ಆರ್.ರಮೇಶ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ವಿಶೇಷ ಆಯುಕ್ತರುಗಳಾದ ತುಳಸಿ ಮದ್ದಿನೇನಿ, ರಂದೀಪ್, ಮನೋಜ್ ಜೈನ್, ವಲಯ ಜಂಟಿ ಆಯುಕ್ತರುಗಳಾದ ವೀರಭದ್ರಸ್ವಾಮಿ, ಶಿವಸ್ವಾಮಿ, ಪಲ್ಲವಿ, ಪೊಲೀಸ್ ಅಧಿಕಾರಿಗಳು, ದೇವಸ್ಥಾನದ ಪದಾಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here